Header Ads
Breaking News

ಎಸ್.ಡಿ.ಎಂ. ಕಾಲೇಜಿನ ಬಿ.ಬಿ.ಎ. ವಿದ್ಯಾರ್ಥಿಗಳಿಂದ ಪೇಪರ್‌ಪೂಲ್ ಯೋಜನೆ

ಬೆಳ್ತಂಗಡಿ: ಸಮಾಜಕಾರ್ಯದಲ್ಲಿ ನಮ್ಮನ್ನು ನಾವು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಆಗ ಮಾತ್ರ ನಮ್ಮ ವ್ಯಕ್ತಿತ್ವ ವಿಕಸನ ಸಾಧ್ಯ. ಅದು ನಮ್ಮ ಮುಂದಿನ ಜೀವನಕ್ಕೆ ಒಳ್ಳೆಯ ಬುನಾದಿಯಾಗುತ್ತದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಈ ಕುರಿತು ಪ್ರಜ್ಞೆ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದು ಸುರ್ಯ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಾ ಹೇಳಿದರು.ಇವರು ಉಜಿರೆಯ ಶ್ರೀ ಧ.ಮಂ. ಪದವಿ ಕಾಲೇಜಿನ ಬಿ.ಬಿ.ಎ. ವಿಭಾಗದಿಂದ ಸರಕಾರಿ ಪ್ರಾಥಮಿಕ ಶಾಲೆ ಸುರ್ಯದಲ್ಲಿ ಹಮ್ಮಿಕೊಂಡಿದ್ದ ಪೇಪರ್‌ಪೂಲ್ ಕ್ಯಾಂಪೇನ್ ಎಂಬ ವಿಶಿಷ್ಟ ಯೋಜನೆಯನ್ನು ಉದ್ದೇಶಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಲು ಪೋಷಕರು ಹಿಂಜರಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಈ ಶಾಲೆಯನ್ನು ಗುರುತಿಸಿ ಕೈಲಾದ ಸೇವೆಯನ್ನು ಮಾಡಿದ್ದಾರೆ. ಇದು ನಿಜಕ್ಕೂ ಮೆಚ್ಚುವಂತಹ ಕೆಲಸ ಎಂದು ನುಡಿದರು.ಪೇಪರ್‌ಪೂಲ್ ಯೋಜನೆಯ ಅನುಸಾರ ಶಾಲೆಯ ೪೫ ವಿದ್ಯಾರ್ಥಿಗಳಿಗೆ ಸುಮಾರು 200 ಪುಸ್ತಕಗಳನ್ನು ಹಾಗೂ ಲೇಖನ ಸಾಮಗ್ರಿಗಳ ಕಿಟ್‌ನ್ನು ವಿತರಿಸಲಾಯಿತು. ಶಾಲಾ ಪರಿಸರದ ಸುತ್ತಮುತ್ತ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರಾದ ಶೋಭಾ, ಅನಿತಾ ಹಾಗೂ ಬಿ.ಬಿ.ಎ. ಪ್ರಾಧ್ಯಾಪಕರಾದ ಶ್ರೇಯಸ್ ಹಾಗೂ ಶರಶ್ಚಂದ್ರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ತೃತೀಯ ಬಿ.ಬಿ.ಎ. ವಿದ್ಯಾರ್ಥಿನಿ ಪೂಜಾ ನಿರೂಪಿಸಿದರು.

Related posts

Leave a Reply

Your email address will not be published. Required fields are marked *