Header Ads
Header Ads
Breaking News

ಎ.ಜೆ. ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಎಜೆಐಇಟಿ ಆಕಾರ್-2k19

ಮಂಗಳೂರಿನ ಕೊಟ್ಟಾರಚೌಕಿಯಲ್ಲಿರುವ ಎ.ಜೆ. ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ರಾಜ್ಯಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ಎಜೆಐಇಟಿ ಆಕಾರ್-2k19 ಎಂಬ ಸ್ಪರ್ಧೆಗೆ ಚಾಲನೆ ದೊರಕಿತ್ತು. 2 ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಹಿಸಿದ್ರು.
ನಗರದ ಕೊಟ್ಟಾರಚೌಕಿಯಲ್ಲಿರುವ ಎ.ಜೆ. ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನಲ್ಲಿ ರಾಜ್ಯಮಟ್ಟದ ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ಎಜೆಐಇಟಿ ಆಕಾರ್-2k19 ಎಂಬ ಸ್ಪರ್ಧೆಗೆ ಚಾಲನೆ ಸಿಕ್ಕಿತು. 2ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಕ್ಕೆ ಪ್ರಾಂಶುಪಾಲ ಡಾ.ಶಾಂತರಾಮ ರೈ ಸಿ ಅವರು ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ರಾಜ್ಯದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು, ಇದು ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆಯಾಗಿದೆ ಎಂದು ಅವರು ಹೇಳಿದರುಮೆಕ್ಯಾನಿಲ್ ವಿಭಾಗದ ಮುಖ್ಯಸ್ಥರಾದ ಡಾ|ರಾಜೇಶ್ ರೈ.ಪಿ ಅವರು, ಯಾವೆಲ್ಲ ಸ್ಪರ್ಧೆ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಕಾರ್ಯಕ್ರಮದ ಸಂಯೋಜಕರಾದ ಡಾ|ಶೋಭಿತ್ ಶೆಟ್ಟಿ, ಮಂಜುಕಿರಣ್.ಬಿ. , ವಿದ್ಯಾರ್ಥಿ ಸಂಯೋಜಕರಾದ ಪ್ರಶಾಂತಿ ಶೆಟ್ಟಿ, ಜೆನಿಫರ್ ಪಿರೇರಾ, ವಿಶಾಲ್ ಶೇಟ್, ಗಗನ್ ಬಿ.ಎಂ, ರಂಜಿತ್ ಮತ್ತಿ ಮತ್ತಿತರರು ಉಪಸ್ಥಿತರಿದ್ದರು.ಪೇಪರ್ ಪ್ರಸೆಂಟೇಶನ್, ಗೇಮಿಂಗ್, ಕ್ಲೆ ಮಾಡ್‌ಲಿಂಗ್, ಕ್ವಿಜೊಟಿಕಾ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

Related posts

Leave a Reply

Your email address will not be published. Required fields are marked *