Header Ads
Header Ads
Header Ads
Breaking News

ಎ.ಜೆ. ಇನ್‌ಸ್ಟಿಟ್ಯೂಟ್‌ನಲ್ಲಿ ಗ್ರಾಜ್ಯುವೇಶನ್ ಡೇ ಎಜೆಐಎಹೆಚ್‌ಎಸ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಎಜೆ ಅಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮ

ಮಂಗಳೂರಿನ ಕುಂಟಿಕಾನದಲ್ಲಿರುವ ಎಜೆ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸಯನ್ಸ್ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ ಎಜೆ ಅಡಿಟೋರಿಯಂನಲ್ಲಿ ನಡೆಯಿತು.ಎಜೆ ಅಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು.

 ಇದೇ ವೇಳೆ ಮಾತನಾಡಿದ ಮೇಯರ್ ಕವಿತಾ ಸನಿಲ್ ವಿವಿಧೆಡೆಗಳಿಂದ ಬಂದ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣವನ್ನು ಮುಗಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಅಥವಾ ತರಬೇತಿಗೆ ತೆರಳುತ್ತಿರುವುದು ಸಂತಸದ ವಿಚಾರ ಎಂದ ಅವರು, ಮುಂದಿನ ದಿನಗಳಲ್ಲಿ ಸಾಮಜದಲ್ಲಿ ಕಾರ್ಯ ಸಾಧನೆಗೆ ಮುಂದಾಗಿ ಎಂದು ಶುಭ ಹಾರೈಸಿದರು. ಲಕ್ಷ್ಮೀ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಎಜೆ ಶೆಟ್ಟಿ ಮಾತನಾಡಿ ಪದವಿ ಪ್ರದಾನ ಸ್ವೀಕರಿಸಿದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಈ ಸಂದರ್ಭ ಎಜೆ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸಯನ್ಸ್‌ನ ಡಾ. ಫ್ರಾನ್ಸಿಸ್ ಎನ್.ಪಿ. ಮೊಂತೆರೊ, ಡೀನ್ ಡಾ. ಅಶೋಕ್ ಹೆಗ್ದೇ, ಲಕ್ಷ್ಮೀ ಮೆಮೊರಿಯಲ್ ಎಜ್ಯುಕೇಶನ್ ಟ್ರಸ್ಟ್‌ನ ಉಪಾಧ್ಯಕ್ಷರಾದ ಪ್ರಶಾಂತ್ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.
ವರದಿ: ಶರತ್

Related posts

Leave a Reply