Header Ads
Header Ads
Header Ads
Breaking News

ಏಳು ಮಂದಿ ಶಿಕ್ಷಕರಿಗೆ ಸನ್ಮಾನ ವಿಟ್ಲದ ಚಂದಳಿಕೆ ಸರ್ಕಾರಿ ಶಾಲೆಯಲ್ಲಿ ಕಾರ್ಯಕ್ರಮ

 

ವಿಟ್ಲದ ಚಂದಳಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಏಳು ಮಂದಿ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಶಿಕ್ಷಣ ಸಯೋಜಕಿ ಪುಷ್ಪ ಅವರು ಶಿಕ್ಷಕರ ಜವಾಬ್ದಾರಿ ಮಹತ್ವದಾಗಿದೆ. ಈ ಜವಾಬ್ದಾರಿಗಳನ್ನು ನಿಭಾಯಿಸಿಕೊಂಡು ಅರ್ಥೈಸಿಕೊಂಡು ನಡೆದಾಗ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಿದ ಸಂತೃಪ್ತಿ ಸಿಗುತ್ತದೆ. ಪ್ರತಿಯೊಬ್ಬರು ಶಿಕ್ಷಕರು ಪ್ರಮಾಣಿಕತೆಯಿಂದ ಕೆಲಸ ಮಾಡಿದಾಗ ಜೀವನ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.ಮುಖ್ಯ ಶಿಕ್ಷಕಿ ಪುಷ್ಪಾವತಿ ಬಿ, ಶಿಕ್ಷಕರಾದ ಪ್ರಸನ್ನ, ಚಂದ್ರಶೇಖರ, ಪ್ರವೀಣ್ ಶೆಟ್ಟಿ, ರಮ್ಯ, ಅಶ್ವಿನಿ, ರಾಜೇಶ್ವರಿ ಹಾಗೂ ಬಿಸಿಯೂಟ ಅಡುಗೆ ಸಿಬ್ಬಂದಿಗಳಾದ ಸುಮತಿ, ಚಂದ್ರಾವತಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ವಿಟ್ಲದ ಉದ್ಯಮಿ ಸುಬ್ರಯ ಪೈ ಉದ್ಘಾಟಿಸಿದರು. ನಿವೃತ್ತ ಶಿಕ್ಷಕ ವಿಠಲ ಶೆಟ್ಟಿ, ಬಿ‌ಆರ್‌ಪಿ ನಾರಾಯಣ ಗೌಡ, ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ ಮೊದಲಾದವರು ಉಪಸ್ಥಿತರಿದ್ದರು.

ವರದಿ: ಮಹಮ್ಮದ್ ಆಲಿ ವಿಟ್ಲ

Related posts

Leave a Reply