
ಗಲಾಟೆ ಪ್ರಕರಣದಲ್ಲಿ ಶಿಕ್ಷೆಗೊಳಪಟ್ಟು ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಏಳು ವರ್ಷಗಳ ನಂತರ ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಪುತ್ತೂರು ನಿವಾಸಿಗಳಾದ ನಾರಾಯಣ ನಾಯ್ಕ, ವೆಂಕಪ್ಪ ನಾಯ್ಕ ಬಂಧಿತ ಆರೋಪಿಗಳು.2009ರಲ್ಲಿ ಕನ್ಯಾನದಲ್ಲಿ ನಡೆದ ಗಲಾಟೆಯೊಂದರಲ್ಲಿ ಭಾಗಿಯಾಗಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು 2013ರಲ್ಲಿ ಇಬ್ಬರು ಆರೋಪಿಗಳ ಮೇಲೆ ಆರೋಪ ಸಾಭಿತಾಗಿತ್ತು. ನ್ಯಾಯಾಲಯವು ಶಿಕ್ಷೆಯನ್ನು ವಿಧಿಸಿತ್ತು. ಅದಾದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ವಿಟ್ಲ ಎಸೈ ವಿನೋದ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಜಯಕುಮಾರ್, ಪ್ರಸನ್ನ, ಪ್ರತಾಫ್, ಹೇಮರಾಜ್, ವಿನಯಕ್ ಅವರು ಪುತ್ತೂರಿನಲ್ಲಿ ಬಂಧಿಸಿದ್ದಾರೆ.