Header Ads
Header Ads
Breaking News

ಐಎಎಸ್ ಹುದ್ದೆಗೆ ಸಸಿಕಾಂತ್ ಸೆಂಥಿಲ್ ರಾಜೀನಾಮೆ

ಮಂಗಳೂರಿನಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಅತ್ಯಂತ ಕ್ರಿಯಾತ್ಮಕ ವ್ಯಕ್ತಿತ್ವವುಳ್ಳ ಜಿಲ್ಲಾಧಿಕಾರಿ ಎಂದು ಹೆಸರು ಗಳಿಸಿದ್ದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ತಮ್ಮ ಐಎಎಸ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ವೈಯಕ್ತಿಕ ಕಾರಣ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಸಸಿಕಾಂತ್ ಸೆಂಥಿಲ್ ಅವರು ಉಲ್ಲೇಖಿಸಿದ್ದಾರೆ. ನಡುವೆ ಅವರು ಬರೆದಿರುವ ಪತ್ರ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಪ್ರಜಾಪ್ರಭುತ್ವದ ಮೌಲ್ಯಗಳು ಕುಸಿಯುತ್ತಿರುವ ಸಂದರ್ಭದಲ್ಲಿ ಮೌಲ್ಯಗಳೊಂದಿಗೆ ರಾಜಿ ಮಾಡಿಕೊಂಡು ಕೆಲಸ ಮಾಡುವುದು ನನ್ನ ಮನಸಾಕ್ಷಿಗೆ ವಿರುದ್ಧವಾದ ಕೆಲಸ ಎಂದು ಭಾವಿಸುತ್ತೇನೆ. ಮುಂದಿನ ದಿನಗಳು ಇನ್ನಷ್ಟು ಕಠಿಣವಾಗಿರಲಿದೆ ಎನ್ನುವುದು ನನ್ನ ಭಾವನೆ. ಇದಕ್ಕಾಗಿ ಸರ್ಕಾರಿ ಸೇವೆಯಿಂದ ಹೊರಬರಲು ಯತ್ನಿಸುತ್ತಿದ್ದೇನೆ ಎಂದು ಸಸಿಕಾಂತ್ ಸೆಂಥಿಲ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 2017ರ ಅಕ್ಟೋಬರ್ 20ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಇದಕ್ಕೂ ಮುನ್ನ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ದ.ಕ. ಜಿಲ್ಲೆಯಲ್ಲಿ ಕಳೆದ ವರ್ಷದ ಭೀಕರ ಮಳೆ, ಈ ವರ್ಷದ ಪ್ರವಾಹ, ಅತಿವೃಷ್ಠಿ, ಡೆಂಗ್ಯು, ಮರಳು ಸಮಸ್ಯೆ ಹೀಗೆ ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು.

Related posts

Leave a Reply

Your email address will not be published. Required fields are marked *