Header Ads
Header Ads
Breaking News

ಐಕ್ಯೂಎಸಿ ಅಡಿಯಲ್ಲಿ ವಿದ್ಯಾರ್ಥಿ ಸಂಶೋಧನಾ ಪ್ರಬಂಧ ಮಂಡನೆ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಮಾನವಿಕ ವಿಭಾಗದ ವತಿಯಿಂದ ಐಕ್ಯೂಎಸಿ ಅಡಿಯಲ್ಲಿ ವಿದ್ಯಾರ್ಥಿ ಸಂಶೋಧನಾ ಪ್ರಬಂಧ ಮಂಡನೆಯನ್ನು ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಉದ್ಘಾಟಿಸಲಾಯಿತು. 

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಸಂಶೋಧನೆಗಳು ಮೌಲ್ಯಯುತವಾಗಿರಬೇಕು. ಸೂಕ್ತ ದಾಖಲೆ, ವೈಜ್ಞಾನಿಕ ವಿಶ್ಲೇಷಣೆ, ಗಹನವಾದ ಚಿಂತನೆ ಇದ್ದಲ್ಲಿ ಸಂಶೋಧನೆ ಹೆಚ್ಚು ಮೌಲ್ಯಯುತವಾಗಿರುತ್ತದೆ ಎಂದರು.ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ವಿ ಜೋಶಿ, ಉಡುಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ವಾಣಿ ಬಲ್ಲಾಳ್ ಮುಖ್ಯ ಅತಿಥಿಯಾಗಿದ್ದರು. ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್, ಮಾನವಿಕ ವಿಭಾಗದ ಡೀನ್ ಪ್ರೊ.ಸಂಧ್ಯಾ ಕೆ.ಎಸ್ ಉಪಸ್ಥಿತರಿದ್ದರು.