Header Ads
Header Ads
Breaking News

ಶಾಸಕ ಐವನ್ ಡಿಸೋಜಾ ನೇತೃತ್ವದಲ್ಲಿ ನ.6ರಂದು ತೃತೀಯ ವರ್ಷದ ದೀಪಾವಳಿ ಹಬ್ಬ

ದೀಪಾವಳಿ ಪ್ರಯುಕ್ತ ವಿಧಾನಪರಿಷತ್ ಶಾಸಕರಾದ ಐವನ್ ಡಿಸೋಜಾ ಅವರ ನೇತೃತ್ವದಲ್ಲಿ ತೃತೀಯ ವರ್ಷದ ದೀಪಾವಳಿ ಹಬ್ಬವನ್ನು ನವಂಬರ್ 6ರಂದು ಮಂಗಳೂರಿನ ಪುರಭವನದಲ್ಲಿ ಸರ್ವಧರ್ಮಗಳ ಹಬ್ಬವನ್ನಾಗಿ ಆಚರಿಸಲು ನಿರ್ಧರಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಪಾಲಿಕೆ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್‌ನ ಶಾಸಕರಾದ ಐವನ್ ಡಿಸೋಜಾ ಅವರು, ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಗೂಡು ದೀಪ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯ ವಿಜೇತರಿಗೆ ಪ್ರಥಮ, ದ್ವಿತೀಯ ನಗದು ಬಹುಮಾನ ಹಾಗೂ ಪ್ರೋತ್ಸಾಹ ಬಹುಮಾನಗಳನ್ನು ನೀಡಲಾಗುವುದು. ಇದರ ಜೊತೆಗೆ ಭಾಷಣ ಸ್ಪರ್ಧೆ ದೀಪಾವಳಿ ಹಬ್ಬದ ಔಚಿತ್ಯತೆ ಸೌಹಾರ್ಧತೆಯ ಬಗ್ಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಹಾಗೇಯೇ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಶಾಲಾ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ವೈಶಿಷ್ಠ್ಯತೆಯ ಕಲ್ಪನೆ ಎಂಬುವುದ ಬಗ್ಗೆ ಚಿತ್ರಕಲಾ ಸ್ಪರ್ಧೇಯನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಚಿವರಾದ ಯು.ಟಿ. ಖಾದರ್ ಅವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಯಮಾಲಾ, ಪ್ರದೀಪ್ ಕುಮಾರ ಕಲ್ಕೂರ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಭಾಸ್ಕರ ಕೆ. ಮೊಯ್ಲಿ, ಮಾಜಿ ಸಚಿವ ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

Related posts

Leave a Reply