
ವಿಟ್ಲ: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತುಳುನಾಡ ಜಾತ್ರೆ, ಶ್ರೀ ಒಡಿಯೂರು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.
ಸತ್ಯ ನಾರಾಯಣ ಪೂಜೆಯ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚ ನೀಡಿದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರಯ ಬದುಕು ನಿರಂತರ ಹರಿಯುವ ನೀರಿನಂತೆ ಚಲನಶೀಲವಾಗಿರುವುದು. ಧರ್ಮದ ಪಥದಲ್ಲಿ ನಾವೆಲ್ಲ ಸಾಗಿದಾಗ ನಮ್ಮ ಬದುಕು ಹಸನಾಗುತ್ತದೆ. ಸಮಾಜ ಸೇವೆ ಸಂತನ ಕರ್ತವ್ಯ, ಮನಸ್ಸು ಎಂಬ ಅಲೆ ಅಂತರಂಗದಲ್ಲಿ ಕ್ರೀಯಾಶೀಲವಾಗಿರುತ್ತದೆ ಎಂದು ಹೇಳಿದರು.
ದಿವ್ಯ ಉಪಸ್ಥಿತರಿದ್ದ ಸಾಧ್ವಿ ಶ್ರೀ ಮಾತಾನಂದಮಯೀ ರವರು ಆಶೀರ್ವಚನ ನೀಡಿ ಉತ್ತಮ ಕಾರ್ಯಗಳಿಂದ ಜೀವನ ಸಾರ್ಥಕತೆ, ಆತ್ಮಸಾಕ್ಷಾತ್ಕಾರ ಪ್ರಾಪ್ತಿಯಾಗುತ್ತದೆ. ದೇವರಲ್ಲಿ ಸಮರ್ಪಣಾ ಭಾವದ ಭಕ್ತಿ ಇಟ್ಟಾಗ ಅನುಗ್ರಹ ಸಾಧ್ಯ. ಸಂತನ ಬದುಕು ಅದುಸಮಾಜಕ್ಕಾಗಿ ಎಂದರು.
ಮರೋಳಿ ಶ್ರೀ ಸೂರ್ಯನಾರಾಯಣ ದೇವಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಶೆಟ್ಟಿ ಮೊಡಂಕಾಪುಗುತ್ತು,ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಕೊಟ್ಟಾರಿ, ತುಳು ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷರಾದ ಎ.ಸಿ.ಭಂಡಾರಿ, ಒಡಿಯೂರು ಶ್ರೀ ವಿವಿದೋದ್ದೇಶ ಸೌಹಾರ್ಧ ಸಹಕಾರಿಯ ಅಧ್ಯಕ್ಷರಾದ ಎ. ಸುರೇಶ್ ರೈ, ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಸಮಿತಿ ಮಂಗಳೂರು ವಲಯ ಕಾರ್ಯಧ್ಯಕ್ಷ ಜಿತೇಂದ್ರ ಕೊಟ್ಟಾರಿ, ಉದ್ಯಮಿ ಭಗವಾನ್ ಆಳ್ವ, ವಾಮಯ್ಯ ಶೆಟ್ಟಿ ಮುಂಬೈ, ಅಜಿತ್ ಕುಮಾರ್ ಪಂದಳಂ, ಕೃಷ್ಣ ಶೆಟ್ಟಿ ಮುಂಬೈ ರಥೋತ್ಸವ ಸ್ವಾಗತ ಸಮಿತಿ ಸಂಚಾಲಕ ಲಿಂಗಪ್ಪ ಗೌಡ ಪನೆಯಡ್ಕ, ಸೇರಾಜೆ ಗಣಪತಿ ಭಟ್ , ಯಶವಂತ ವಿಟ್ಲ, ಕದ್ರಿ ನವನೀತ ಶೆಟ್ಟಿ, ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದತ್ತಪ್ರಕಾಶ ವಿಂಶತಿ ವಿಷೇಶಾಂಕವನ್ನು ಸ್ವಾಮೀಜಿಯವರು ಬಿಡುಗಡೆ ಮಾಡಿದರು.ರಾತ್ರಿ ಶ್ರೀ ದತ್ತಾಂಜನೇಯ ದೇವರ ವೈಭವೋಪೇತ ರಥಯಾತ್ರೆ ಒಡಿಯೂರು ಶ್ರೀ ಸಂಸ್ಥಾನದಿಂದ ಗ್ರಾಮ ದೈವಸ್ಥಾನ ಮಿತ್ತನಡ್ಕಕ್ಕೆ ಹೋಗಿ ಕನ್ಯಾನ, ಪೇಟೆ ಸವಾರಿ, ನಂತರ ಸದ್ಗುರು ಶ್ರೀ ನಿತ್ಯಾನಂದ ಮಂದಿರಲ್ಲಿ ವಿಶೇಷ ಪೂಜೆಯ ಬಳಿಕ ಶ್ರೀ ಸಂಸ್ಥಾನಕ್ಕೆ ಮರಳಿದೆ. ಒಟ್ಟು ಎರಡು ಗ್ರಾಮಗಳನ್ನು ಈ ಈ ರಥ ಸಂಚರಿಸಿದೆ. ರಥಯಾತ್ರೆಯಲ್ಲಿ ಕೊಂಬು, ವಾದ್ಯ, ತಾಲೀಮ್, ವಿವಿಧ ಟ್ಯಾಬ್ಲೊ, ಸಿಡಿಮುದ್ದು, ಗಮನ ಸೆಳೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವಿಟ್ಲ, ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್, ವಿಟ್ಲ ಸೀಮೆ, ಹಾಗೂ ವಿವಿಧ ಭಜನ ಮಂಡಳಿಗಳಿಂದ ಕುಣಿತ ಭಜನೆ ರಥಯಾತ್ರೆಯಲ್ಲಿ ಸಾಗಿದೆ.