Header Ads
Header Ads
Header Ads
Breaking News

ಒಳಾಂಗಣ ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಶ್ರಮಿಸುತ್ತೇನೆ : ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ಕಾರ್ಕಳ: ಕಾರ್ಕಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರದಿಂದ ಎಲ್ಲ ರೀತಿಯಲ್ಲಿ ನೆರವು ನೀಡುವಲ್ಲಿ ರಾಜ್ಯ ಸರಕಾರ ಕಟಿಬದ್ಧವಾಗಿದೆ. ಕಾರ್ಕಳ ತಾಲೂಕು ಒಳಾಂಗಣ ಕ್ರೀಡಾಂಗಣಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ಶ್ರಮಿಸುತ್ತೇನೆ ಎಂದು ಕರ್ನಾಟಕ ಸರ್ಕಾರದ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ದೇವರಾಜ ಅರಸು ಭವನ ಉದ್ಘಾಟನೆ, ಮಂದಿರದ ಆವರಣದಲ್ಲಿ ಗಣ್ಯ ವ್ಯಕ್ತಿಗಳ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಕಾರ್ಕಳ ತಾಲೂಕು ಕ್ರಿಡಾಂಗಣದಲ್ಲಿ ನಿರ್ಮಿಸಲಾದ ಈಜುಕೊಳ, ವಿಕಾಸ ವಿವಿದ್ಧೋದ್ಧೇಶ ಸೌಹಾರ್ದ ಸಹಕಾರಿ(ನಿ) ಕಾರ್ಕಳ, ಶುಭಂ ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ) ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ವಿಕಾಸ ಸ್ತ್ರೀಧನ್ ಇವುಗಳ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಶಾಸಕ ವಿ.ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, 1.64 ಕೋಟಿ ರೂ. ವೆಚ್ಚದಲ್ಲಿ ಈ ಈಜುಕೊಳ ನಿರ್ಮಾಣವಾಗಿದೆ. ಮಲೆನಾಡು ಅಭಿವೃದ್ದಿ ನಿಧಿ, ಕ್ರೀಡಾಕೂಟದ ಯೋಜನೆಗಳು ಹಾಗೂ ಶಾಸಕರ ನಿಧಿಯನ್ನು ಬಳಕೆ ಮಾಡಲಾಗಿದೆ ಎಂದರು. ಈ ಸಂದರ್ಭ ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಭಾಬು, ಶಾಸಕರಾದ ರಘುಪತಿ ಭಟ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *