Header Ads
Header Ads
Breaking News

ಕಂಚಿನಡ್ಕಪದವಿನಲ್ಲಿ ಡಾಂಬರು ಡಬ್ಬಿಗಳ ಕಳವು ಪ್ರಕರಣ : 43 ಬ್ಯಾರೆಲ್ ಡಾಂಬರ್ ಸಹಿತ ಲಾರಿ ವಶ

ಲಕ್ಷಾಂತರ ರೂ. ಮೌಲ್ಯದ ಡಾಂಬರು ಡಬ್ಬಿಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಸಮೀಪದ ಆದರ್ಶನಗರದ ನೆಕ್ಕಿಲಾಡಿ ನಿವಾಸಿ ಉಮರುಲ್ ಫಾರೂಕ್ ಹಾಗೂ ವಿಟ್ಲ ಕಸಬಾ ಮೇಗಿನಪೇಟೆ ಮುಹಮ್ಮದ್ ಆಶ್ರಫ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ 43 ಬ್ಯಾರೆಲ್ ಡಾಂಬರ್ ಸಹಿತ ಲಾರಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ದ.ಕ. ಎಸ್ಪಿ ರವಿಕಾಂತೇ ಗೌಡ ಅವರು ಮಾಹಿತಿ ನೀಡಿದ್ದಾರೆ.

ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಜಿತ್ ವಿ.ಜೆ. ಹಾಗೂ ಬಂಟ್ವಾಳ ಎಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ ಮಾರ್ಗದರ್ಶನದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ಗ್ರಾಮಾಂತರ ಉಪನಿರೀಕ್ಷಕ ಪ್ರಸನ್ನ, ಬಂಟ್ವಾಳ ನಗರ ಠಾಣಾ ಅಪರಾಧ ವಿಭಾಗದ ಎಸ್ಸೈ ಹರೀಶ್ ಎಂ.ಆರ್.ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

Leave a Reply