Header Ads
Header Ads
Breaking News

ಕಂಬದಕೋಣೆ ಕಾಲೇಜು ಕಟ್ಟಡ ಗುದ್ದಲಿ ಪೂಜೆ, ಶಾಸಕ ಕೆ. ಗೋಪಾಲ ಪೂಜಾರಿಯವರಿಂದ ಶಿಲಾನ್ಯಾಸ


ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ರಚನೆಗೆ ೪೪ ಲಕ್ಷದ ಕಾಮಗಾರಿಗೆ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷ ಶಾಸಕ ಕೆ. ಗೋಪಾಲ ಪೂಜಾರಿ ಗುದ್ದಲಿ ಪೂಜೆ ನೇರವೇರಿಸಿದರು.
ಈ ಸಂದರ್ಭ ಮಾತನಾಡಿದ ಅವರು ಕಂಬದಕೋಣೆ ಕಾಲೇಜು ಅಲ್ಲಿನ ಶಿಕ್ಷಕರ ಪರಿಶ್ರಮದಿಂದಾಗಿ ಮಾದರಿಯಾಗಿ ಗುರುತಿಸಿಕೊಂಡಿದೆ. ಶಿಕ್ಷಕರ ಕಾರ್‍ಯವನ್ನು ಅಭಿನಂದಿಸುವುದಾಗಿ ತಿಳಿಸಿದರು. ಶಾಲಾ ಮೈದಾನಕ್ಕೆ ಸುಮಾರು ೬ ಲಕ್ಷ ವೆಚ್ಚದಲ್ಲಿ ಅಳವಡಿಸಿರುವ ಇಂಟರ್‌ಲಾಕ್ ವ್ಯವಸ್ಥೆಯನ್ನು ಶಾಸಕರು ಇದೇ ವೇಳೆ ಉದ್ಘಾಟಿಸಿದರು. ಈ ಸಂದರ್ಭ ಕಂಬದಕೋಣೆ ಗ್ರಾ. ಪಂ. ಅಧ್ಯಕ್ಷ ರಾಜೇಶ ದೇವಾಡಿಗ, ಕೆರ್ಗಾಲು ಗ್ರಾ. ಪಂ. ಅಧ್ಯಕ್ಷೆ ಸೋಮು, ಜಿಲ್ಲಾ ಪಂ. ಸದಸ್ಯೆ ಗೌರಿ ದೇವಾಡಿಗ, ತಾ. ಪಂ. ಸದಸ್ಯ ಜಗದೀಶ ದೇವಾಡಿಗ, ಕಂಬದಕೋಣೆ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉಪಾಧ್ಯಕ್ಷ ಸುಂದರ ಕೊಠಾರಿ, ಕಾಲೇಜು ಪ್ರಾಂಶುಪಾಲ ಜಯಲಕ್ಷ್ಮೀ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply