Header Ads
Breaking News

ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮಬೈದರ್ಕಳ ಗರಡಿ ಕ್ಷೇತ್ರದಲ್ಲಿ ಅದ್ಧೂರಿಯಿಂದ ನಡೆಯುತ್ತಿದೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ತೌಳವ ದ್ರಾವಿಡ ಶೈಲಿಯಲ್ಲಿ, ಸಂಪೂರ್ಣ ಶಿಲಾಮಯವಾಗಿ ಪುನಃ ರ್ನಿರ್ಮಾಣಗೊಂಡ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಮೇ 17ರಿಂದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಬಹಳ ಅದ್ಧೂರಿಯಾಗಿ ಆರಂಭಗೊಂಡಿದೆ. ಮೇ 22ವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಸರ್ವ ಕಾರ್ಯಕ್ರಮಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಡಾ.ಡಿ ವೀರೇಂದ್ರ ಹೆಗ್ಗಡೆ ಉದ್ಘಾಟಿಸಿದ್ರು.

ಬಳಿಕ ಮಾತನಾಡಿದ ಅವರು, ವ್ಯಕ್ತಿಯ ಸಂಕಲ್ಪ ಶಕ್ತಿಯೊಟ್ಟಿಗೆ ದೈವ – ದೇವರುಗಳ ಅನುಗ್ರಹ ಇದ್ದಾಗ ಎಲ್ಲಾ ಕೆಲಸಗಳು ಯಶಸ್ವಿಯಾಗಲು ಸಾಧ್ಯವಿದೆ. ಕಕ್ಯಪದವಿನಲ್ಲಿ ವಿಶಿಷ್ಟ ಶೈಲಿಯ ಸುಂದರವಾದ ಗರಡಿ ನಿರ್ಮಾಣವಾಗಿರುವುದು ಇಲ್ಲಿನ ಜನರ ಸಂಕಲ್ಪ ಶಕ್ತಿ ಮತ್ತು ದೈವಾನುಗ್ರಹಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ರು.

ಮಾಜಿ ಸಚಿವ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಅವರು ಪ್ರಾಸ್ತವಿಕವಾಗಿ ಮಾತನಾಡಿ ತೀರಾ ಗ್ರಾಮೀಣ ಪ್ರದೇಶವಾದ ಕಕ್ಯಪದವಿನಲ್ಲಿ ಎಲ್ಲರ ಸಹಕಾರದಿಂದ ಗರಡಿ ಕ್ಷೇತ್ರವನ್ನು ಪುನರ್ ನಿರ್ಮಿಸಲಾಗಿದೆ. ದೈವ ದೇವಸ್ಥಾನಗಳ ಪುನರುತ್ಥಾನಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಪುಣ್ಯ ಕಾರ್ಯವಾಗಿದೆ ಎಂದರು.

ಸಭಾ ಕಾರ್ಯಕ್ರಮದಲ್ಲಿ ಧರ್ಮಾಕಾರಿ ಡಾ. ವೀರೇಂದ್ರ ಹೆಗ್ಗಡೆಯವರನ್ನು ಸಮಿತಿ ವತಿಯಿಂದ ಮತ್ತು ಶ್ರೀ. ಕ್ಷೇ.ಗ್ರಾ. ಯೋಜನೆ ವಗ್ಗ ವಲಯದ ವತಿಯಿಂದ ಸನ್ಮಾನಿಸಲಾಯಿತು. ಸಮಿತಿಯ ಗೌರವಾಧ್ಯಕ್ಷ ಬಿ.ರಮನಾಥ ರೈಯವರನ್ನು ಹಾಗೂ ವಾಸ್ತುಶಿಲ್ಪಿ ಪ್ರಮಲ್ ಕುಮಾರ್ ಅವರನ್ನು ಗರಡಿ ಕ್ಷೇತ್ರದ ವತಿಯಿಂದ ಸನ್ಮಾನಿಸಲಾಯಿತು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಮೋಕ್ತೇಸರ ಕುಟುಂಬಸ್ಥರಾದ ರಾಜವೀರ್ ಜೈನ್, ಸಂಚಾಲಕರಾದ ಚಿತ್ತರಂಜನ್ ಕಂಕನಾಡಿ, ರೋಹಿನಾಥ ಪಾದೆ, ಕಾರ್ಯಧ್ಯಕ್ಷ ಪದ್ಮಶೇಖರ ಜೈನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ರತ್ನ ಕುಮಾರ್ ಆರಿಗ ನಾಯಿಲ, ಕಕ್ಯಬೀಡು ದುರ್ಗಾಪರಮೇಶ್ವರೀ ದೇವಸ್ಥಾನದ ಅಧ್ಯಕ್ಷ ಜಾರಪ್ಪ ಶೆಟ್ಟಿ ಖಂಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *