Header Ads
Breaking News

ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ

ಮೂಡುಬಿದಿರೆ ತಾಲೂಕಿನ ಕಡಂದಲೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವವು ನೆರವೇರಿತು. ಆದರೆ ಈ ಸಂದರ್ಭದಲ್ಲಿ ಪಂಕ್ತಿಬೇಧ ನಡೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಕಳೆದ ವರ್ಷ ಪಂಕ್ತಿಬೇಧ ವಿಚಾರದಲ್ಲಿ ವಿವಾಧ ಉಂಟಾಗಿ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿರುವುದನ್ನು ಇಲ್ಲಿ ಸ್ಮರಿಸಬಹುದು. ಆ ಬಳಿಕ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ನು ಮುಂದೆ ಇಲ್ಲಿ ಪಂಕ್ತಿಬೇಧಕ್ಕೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಈ ಬಾರಿ ಮತ್ತೆ ಬ್ರಾಹ್ಮಣ ಸಮುದಾಯದ ಮಹಿಳೆಯರೂ ಸೇರಿದಂತೆ ದೇವಳದ ಪ್ರಾಂಗಣದಲ್ಲಿ ಪ್ರತ್ಯೇಕ ಭೋಜನ ನಡೆಸುವ ಮೂಲಕ ಪಂಕ್ತಿಬೇಧ ಮುಂದುವರೆಸಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಗ್ರಾಮಸ್ಥರು ಆಕ್ಷೇಪಿಸಿದಾಗ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ಬಗ್ಗೆ ಮುಂದಿನ ದಿನದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

Related posts

Leave a Reply

Your email address will not be published. Required fields are marked *