Header Ads
Header Ads
Breaking News

ಕಡಂಬು ಗಲಭೆ: ಮತ್ತಿಬ್ಬರು ಆರೋಪಿಗಳ ಬಂಧನ

ವಿಟ್ಲ: ಅಕ್ರಮ ಜಾನುವಾರು ಸಾಗಾಣೆಯ ಸಮಯ ಕಡಂಬುವಿನಲ್ಲಿ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ, ವಿಟ್ಲ ಪೊಲೀಸರ ತಂಡ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಕಂಡಂಬು ನಿವಾಸಿ ಚೇತನ್(24), ಕೊಡುಂಗಾಯಿ ನಿವಾಸಿ ವಿನೋದ್ (23) ಬಂಧಿತ ಆರೋಪಿಗಳಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್, ಬಂಟ್ವಾಳ ಎಎಸ್‌ಪಿ ಸೈದುಲು ಅಡಾವತ್, ಪೊಲೀಸ್ ಇನ್‌ಸ್ಪೆಕ್ಟರ್ ನಾಗರಾಜ್ ಮಾರ್ಗದರ್ಶನದಲ್ಲಿ ವಿಟ್ಲ ಎಸೈ ಯಲ್ಲಪ್ಪ ಅವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಫೆ.೧೨ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದೀಗ ಬಂಧಿತರ ಸಂಖ್ಯೆ 12ಕ್ಕೇರಿದೆ.

Related posts

Leave a Reply