Header Ads
Breaking News

ಕಡಬದಲ್ಲಿ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ

ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯು ಕಡಬದ ತಹಶೀಲ್ದಾರ್ ಕಚೇರಿಯಲ್ಲಿ ನಡೆಯಿತು. ಕಡಬ ತಹಶೀಲ್ದಾರ್ ಬಿ.ಅನಂತ ಶಂಕರ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ಬಳಿಕ ಸಭಕಾರ್ಯಕ್ರಮವು ತಾ.ಪಂ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಎಪಿಎಂಸಿ ಕಟ್ಟಡದಲ್ಲಿ ನಡೆಯಿತು.

ಇನ್ನು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಳ ಅವರು ಕನ್ನಡದ ಭಾಷೆ,ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಗ್ರಾಮೀಣ ಭಾಗದ ಕನ್ನಡ ಹೋರಾಟಗಾರರಿಗೆ,ಸಂಘ ಸಂಸ್ಥೆಗಳಿಗೆ ಗೌರವ ಸಿಗುವಂತಾಗಬೇಕೆಂದು ಹೇಳಿದರು.ಇನ್ನು ಸಭಾಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು ಈ ವೇಳೆ ಶೈಕ್ಷಣಿಕವಾಗಿ ಸಾಧನೆ ಮಾಡಿದ ತಾಲೂಕಿನ ಸಾಧಕರನ್ನು ಸನ್ಮಾನಿಸಲಾಯಿತು. ಈ ವೇಳೆ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಸೇರಿದಂತೆ ಇಲಾಖಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *