Header Ads
Breaking News

ಕಡಬದಲ್ಲಿ ಭೀಕರ ಅಪಘಾತ : ಮಗು ಸೇರಿದಂತೆ ಮೂವರಿಗೆ ಗಾಯ ಆಸ್ಪತ್ರೆಗೆ ದಾಖಲು

ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಹೋಂಡಾ ಡಿಯೋ ಹಾಗೂ ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಮೂವರು ಗಂಭೀರ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಸಂಭವಿಸಿದೆ. ಆಲಂಕಾರಿನ ಜೀಪೊಂದು ಕಡಬ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಎದುರುಗಡೆ ಇದ್ದ ಹೋಂಡಾ ಡಿಯೋ ಹಾಗೂ ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿದ್ದ ತಾಯಿ, ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಕಡಬ ಪೋಲೀಸರು ಮಾಹಿತಿ ಕಲೆ ಹಾಕಿದ್ದಾರೆ.

Related posts

Leave a Reply

Your email address will not be published. Required fields are marked *