Header Ads
Header Ads
Header Ads
Breaking News

ಕಡೇಶ್ವಾಲ್ಯ ದೇವರ ವಿಗ್ರಹಗಳ ಕಳವು ಲಕ್ಷಾಂತರ ರೂ. ಮೌಲ್ಯದ ಸೊತ್ತು ಕಳವು

ಬಂಟ್ವಾಳ ತಾಲೂಕಿನ ಕಡೇಶಿವಾಲಯ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಭಾನುವಾರ ತಡರಾತ್ರಿ ಕಳ್ಳರು ನುಗ್ಗಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಕದ್ದೊಯ್ದಿದ್ದಾರೆ.
ಬಂಟ್ವಾಳ ತಾಲೂಕಿನಲ್ಲಿ ಪ್ರಮುಖ ಕಾರಣಿಕದ ದೇವಸ್ಥಾನ ಇದಾಗಿದ್ದು, ಇಲ್ಲಿ ಸಿಸಿ ಟಿವಿ ಕ್ಯಾಮರಾವನ್ನೂ ಅಳವಡಿಸಲಾಗಿತ್ತು. ಆದರೆ ಕಳ್ಳರು ಕ್ಯಾಮರಾವನ್ನು ಹಾಳುಗೆಡವಿ ಅದರ ಫೂಟೇಜ್ ಗಳನ್ನು ಹೊತ್ತೊಯ್ದಿದ್ದಾರೆ.

ಲಕ್ಷ್ಮೀನರಸಿಂಹ ದೇವರ ಮೂರ್ತಿ ಸಹಿತ ಉಳಿದ ಮೂರ್ತಿಗಳನ್ನೂ ಕದ್ದೊಯ್ದಿರುವ ಕಳ್ಳರು ಉತ್ಸವ ಮೂರ್ತಿಯನ್ನು ಕೊಂಡೊಯ್ದಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೇವಸ್ಥಾನದ ಮುಂಬಾಗಿಲು ಮುರಿದು ಒಳಹೊಕ್ಕ ಕಳ್ಳರು, ಮುಖ್ಯ ದೇವರ ಗರ್ಭಗುಡಿಯ ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಅಲ್ಲಿಂದ ಗರ್ಭಗುಡಿಯಲ್ಲಿದ್ದ ದೇವರ ಮೂರ್ತಿಯನ್ನು ಮತ್ತು ಉಳಿದ ದೇವರ ಗುಡಿಯಲ್ಲಿದ್ದ ಮೂರ್ತಿಗಳನ್ನು ಕದ್ದೊಯ್ದಿದ್ದಾರೆ. ಬಳಿಕ ದೇವಸ್ಥಾನದ ಸಿಸಿ ಕ್ಯಾಮರಾವನ್ನು ಹಾಳುಗೆಡವಿ ಅದರ ಫೂಟೇಜ್ ಗಳನ್ನು ಹೊತ್ತೊಯ್ದಿದ್ದಾರೆ.
ದೇವಸ್ಥಾನದ ಅರ್ಚಕರು ಬೆಳಗ್ಗೆ ಪೂಜೆ ಕಾರ್ಯಕ್ಕೆ ತೆರಳಿದ ಸಂದರ್ಭ ಘಟನೆ ಬೆಳಕಿಗೆ ಬಂದಿದೆ.

Related posts

Leave a Reply