Header Ads
Header Ads
Breaking News

ಕಥುವಾದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಉನ್ನಾವೋ ಅತ್ಯಾಚಾರ ಪ್ರಕರಣದ ವಿರುದ್ಧ ಪ್ರತಿಭಟನೆ ದ.ಕ. ಜಿಲ್ಲಾ ಮುಸ್ಲಿಂ ಸಂಘಟನೆಯ ಒಕ್ಕೂಟದಿಂದ ಮೌನ ಪ್ರತಿಭಟನೆ

ಜಮ್ಮು – ಕಥುವಾ ಬಾಲಕಿಯ ಮೇಲೆ ಸಾಮೂಹಿಕ ಆತ್ಯಾಚಾರ ಕೊಲೆ ಪ್ರಕರಣ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣದ ವಿರುದ್ಧ ದ.ಕ.ಜಿಲ್ಲಾ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಯಿತು.

ಮಂಗಳೂರಿನ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಮುಖಕ್ಕೆ ಕಪ್ಪು ಪಟ್ಟಿ ಧರಿಸಿಕೊಂಡು, ಮೌನ ಧರಣಿ ನಡೆಸಿದ್ರು. ಇನ್ನು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು.ಈ ಬಗ್ಗೆಕೇಂದ್ರ ಸರ್ಕಾರ ದೃಢ ನಿರ್ಧಾರವನ್ನು ಕೈಗೊಳ್ಳಬೇಕೆಂದು ಪ್ರತಿಭಟನೆಯಲ್ಲಿ ದ.ಕ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ಆಶ್ರಫ್ ಆಗ್ರಹಿಸಿದ್ರು. ಈ ವೇಳೆ ಹಲವು ಮಂದಿ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.
ವರದಿ: ನಾಗೇಶ್ ಕಾವೂರು