Header Ads
Header Ads
Breaking News

ಕದ್ರಿಯಲ್ಲಿ ಅಯ್ಯಪ್ಪ ಭಕ್ತರ ಜಾಗೃತ ಸಮಾವೇಶ: ಸುಪ್ರೀಂ ತೀರ್ಪು ಮರುಪರಿಶೀಲನೆಗೆ ಪಟ್ಟು

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಮರುಪರಿಶೀಲನೆಗೆ ಆಗ್ರಹಿಸಿ ಮತ್ತು ಕೇರಳ ಸರ್ಕಾರ ಮೇಲ್ಮನವಿ ಸಲ್ಲಿಸುವಂತೆ ಮಂಗಳೂರಿನಲ್ಲೂ ಅಯ್ಯಪ್ಪ ಭಕ್ತರ ಧ್ವನಿ ಮೊಳಗಿದೆ. ಹೀಗಾಗಿ ಮಂಗಳವಾರ ಕದ್ರಿ ಮೈದಾನದಲ್ಲಿ ಬೃಹತ್ ಜಾಗೃತ ಸಮಾವೇಶ ನಡೆಸಲಾಯ್ತು. ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ಮಂಗಳೂರಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಈ ಪ್ರಯುಕ್ತ ಮಂಗಳೂರಲ್ಲಿ ಶಬರಿಮಲೆ ಉಳಿಸಲು ಅಯ್ಯಪ್ಪ ಸೇವಾ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆದ ಶಬರಿಮಲೆ ಉಳಿಸಿ ಬೃಹತ್ ಜಾಗೃತಿ ಸಮಾವೇಶದ ಬೃಹತ್ ಪ್ರತಿಭಟನೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಭಾಗಿಯಾಗಿದ್ದವು. ಜೊತೆಗೆ
ನೂರಾರು ಮಹಿಳೆಯರು ಭಾಗಿಯಾಗಿದ್ದರು.

ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಅನುಮತಿ ನೀಡಿದ ಸುಪ್ರೀಂ ಕೋರ್ಟ್ ನ ತೀರ್ಪು ಆಘಾತಕಾರಿಯಾಗಿದೆ. ಹಿಂದೂ ಧರ್ಮೀಯರ ಪವಿತ್ರ ಕ್ಷೇತ್ರ ಶಬರಿಮಲೆಯಾಗಿದೆ. ಇಲ್ಲಿ ಪ್ರವೇಶಿಸಲು ಅದಕ್ಕೆ ಆದ ನಿಯಮಗಳಿವೆ. ಆದ್ರೆ ಸುಪ್ರೀಂ ಕೋರ್ಟ್ ಇದಕ್ಕೆ ತದ್ವಿರುದ್ಧವಾದ ತೀರ್ಪು ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ನಡುವೆ ಸಹಿ ಸಂಗ್ರಹ ಮಾಡುವ ಮೂಲಕ ರಾಷ್ಟ್ರಪತಿಗೆ ಕಳುಹಿಸುವ ತೀರ್ಮಾನ ಕೈಗೊಳ್ಳಲಾಯ್ತು.ಬೃಹತ್ ಜಾಗೃತಿ ಸಮಾವೇಶದಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಪ್ರೋ.ಎಂ.ಬಿ.ಪುರಾಣಿಕ್, ಆರ್.ಎಸ್.ಎಸ್. ಸಹ ಪ್ರಾಂತ ಕಾರ್ಯವಾಹ ಪ್ರಕಾಶ್ ಪಿ.ಎಸ್., ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ,ಗುರು ಸ್ವಾಮಿ ವಿಶ್ವನಾಥ, ಶಾಸಕರಾದ ಡಿ.ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಧಾನಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯದರ್ಶಿ ಶರಣ್ ಪಂಪವೆಲ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.ತದ ಬಳಿಕ ಕದ್ರಿ ಮೈದಾನದಿಂದ ಕದ್ರಿ ದೇಗುಲಕ್ಕೆ ಮೆರವಣಿಗೆ ಮೂಲಕ ಸಾಗಿ ಶಬರಿಮಲೆ ಉಳಿಸಲು ವಿಶೇಷ ಪ್ರಾರ್ಥನೆ ಸಲ್ಲಿಸಲಾಯ್ತು. ಈ ಪ್ರತಿಭಟನೆಗೆ ಬಿಗಿ ಪೊಲೀಸ್ ಬಂದೋಬಸ್ತನ್ನ ಕಲ್ಪಿಸಲಾಗಿತ್ತು.

Related posts

Leave a Reply