Header Ads
Breaking News

ಕದ್ರಿ ಮಂಜುನಾಥ ದೇವಾಲಯದಲ್ಲಿ ಮಳೆಗಾಗಿ ನಡೆಯಿತು ಪರ್ಜನ್ಯ ಜಪ

ಎಲ್ಲೆಡೆ ನೀರಿಗಾಗಿ ಹಾಹಾಕಾರ ಕಂಡುಬರ್ತಾ ಇದ್ದು, ನೀರಿಲ್ಲದೆ ಜನ ಜಾನುವಾರುಗಳು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆಗಾಗಿ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಅದರಂತೆ ರಾಜ್ಯದ ಎಲ್ಲಾ ಮುಜರಾಯಿ ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಪರ್ಜನ್ಯ ಜಪ ಹಾಗೂ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.

ಕರಾವಳಿಯ ದೇವಸ್ಥಾನಗಳಲ್ಲಿ ಮಳೆಗಾಗಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯ್ತ. ಇನ್ನು ಇತಿಹಾಸ ಪ್ರಸಿದ್ಧ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯದಲ್ಲಿ ವಿಶ್ವಶ್ರೀ ವಿಠಲದಾಸ್ ತಂತ್ರಿ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಪರ್ಜನ್ಯ ಜಪ ನೆರವೇರಿಸಲಾಯಿತು. ಈ ವೇಳೆ ಮಾತನಾಡಿದ ಧಾರ್ಮಿಕ ದತ್ತಿ ಇಲಾಖೆಯ ವ್ಯವಸ್ಥಾಪನ ಸಮಿತಿ ಸದಸ್ಯೆ ಚಂದ್ರಕಲಾ ದೀಪಕ್, ಈ ಬಾರಿ ವಾಡಿಕೆಯಂತೆ ಮಳೆ ಕಡಿಮೆಯಾಗಿದೆ. ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೂಲಕ ಬೇಕಾದಷ್ಟು ಮಳೆ ಬಂದು, ನೀರಿನ ಸಮಸ್ಯೆ ಬಗೆಹರಿಯಲಿ ಎಂದು ಅವರು ಹೇಳಿದರು. ಈ ವೇಳೆ ಧಾರ್ಮಿಕ ದತ್ತಿ ಇಲಾಖೆಯ ವ್ಯವಸ್ಥಾಪನ ಸಮಿತಿ ಸದಸ್ಯರಾದ ಸುರೇಶ್ ಕುಮಾರ್, ರಂಜನ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *