Header Ads
Breaking News

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಬ್ರಹ್ಮಕಲಶಾಭಿಷೇಕ: ಹಸಿರು ಹೊರೆಕಾಣಿಕೆ ಸಂಗ್ರಹಣ ಕೇಂದ್ರದ ಉದ್ಘಾಟನೆ

ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅಷ್ಟೋತ್ತರ ಸಹಸ್ರ ಬ್ರಹ್ಮಕಲಶಾಭಿಷೇಕ ಮತ್ತು ಮಹಾದಂಡರುದ್ರಾಭಿಷೇಕ ಹಾಗೂ ಮಹಾರುದ್ರಯಾಗ ಪ್ರಯುಕ್ತ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನ ಮತ್ತು ಕೊಡಿಯಾಲ್‌ಬೈಲ್ ಫ್ರೆಂಡ್ಸ್ ಇವರ ಸಹಕಾರದಿಂದ ಹಸಿರು ಹೊರೆಕಾಣಿಕೆ ಸಂಗ್ರಹಣ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಹಸಿರು ಹೊರೆಕಾಣಿಕೆ ಅಧ್ಯಕ್ಷರಾದ ಗಣೇಶ್ ಶೆಟ್ಟಿ ದೀಪಬೇಳಗಿಸು ಮೂಲಕ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಅಷ್ಟೋತ್ತರ ಸಹಸ್ರ ಬ್ರಹ್ಮಕಲಶಾಭಿಷೇಕ ಪ್ರಯುಕ್ತ ಹಸಿರು ಹೊರೆಕಾಣಿಕೆಗೆ ಹೆಚ್ಚಿನ ಜನರು ಹೊರೆಕಾಣಿಕೆ ಸಲ್ಲಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿದೆ ಎಂದರು.

ಬಳಿಕ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಮಾತನಾಡಿ ಕದ್ರಿ ಶ್ರೀ ಮಂಜುನಾಥ ಬ್ರಹ್ಮಕಲಶಾಭಿಷೇಕದ ಧಾರ್ಮಿಕ ಕಾರ್ಯಕ್ರಮವು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಮಂಗಳೂರಿನ ಎಲ್ಲಾ ಭಕ್ತರು ಸಹಕರಿಸಬೇಕು ಎಂದರು.
ಕಾರ್ಯಕ್ರಮದಲ್ಲಿ. ಲಯನ್ ಕಿಶೋರ್ ಡಿ. ಶೆಟ್ಟಿ, ಮ.ನ.ಪ ಮುಖ್ಯ ಸಚೇತಕರಾದ ಶಶಿಧರ್ ಹೆಡ್ಗೆ,ಸುಧಿರ್ ಮತ್ತಿತರರು ಉಪಸ್ತಿತರಿದ್ದರು.

Related posts

Leave a Reply

Your email address will not be published. Required fields are marked *