Breaking News

ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್, ಹಲವೆಡೆ ಮಿಶ್ರ ಪ್ರತಿಕ್ರಿಯೆ; ದ.ಕ. ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ


ಕನ್ನಡಪರ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್’ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೋಲಾರ ಜಿಲ್ಲೆಯಾದ್ಯಂತ ಬಂದ್‌ಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಒದಗಿಸಲು ಮತ್ತು ಕಳಸಾ ಬಂಡೂರಿ ನೀರಾವರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಸೋಮವಾರ ಬಂದ್‌ಗೆ ಕರೆ ನೀಡಲಾಗಿತ್ತು. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಹಾಗೂ ಮೆಟ್ರೊ ರೈಲು ಸಂಚಾರ ಎಂದಿನಂತೆ ನಡೆಯಿತು. ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಬಸ್ ಸಂಚಾರ ವ್ಯತ್ಯಯವಾಗಿದೆ. ನವಲಗುಂದದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಚಿಕ್ಕಮಗಳೂರು ನಗರದಲ್ಲಿ ಅಂಗಡಿ ಮುಂಗಟ್ಟೆಗಳು ಮುಚ್ಚಿವೆ. ಕೋಲಾರದಲ್ಲಿ ಬಂದ್ ಕರೆಗೆ ಜಿಲ್ಲೆಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಂದ್ ಹಿನ್ನಲೆ ನವಲಗುಂದದಲ್ಲಿ ಮುನ್ನೆಚ್ಚರಿಕೆಯಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಾವಣಗೆರೆಯಲ್ಲಿ ಬಂದ್ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ಮೆರವಣಿಗೆ ನಡೆಯಿತು. ಇನ್ನೂ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೆ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದ ಕನ್ನಡ ಪರ ಕಾರ್ಯಕರ್ತರನ್ನು ಬಂಧಿಸಲಾಯಿತು.

Related posts

Leave a Reply