Header Ads
Header Ads
Header Ads
Breaking News

ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಕೇಸ್ ಹಿಂಪಡೆಯಿರಿ ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ರಫಾಯಿಲ್ ರಾಜ್ ಮನವಿ

 

ರಾಜ್ಯದ ಎಲ್ಲಾ ಕನ್ನಡ ಪರ ಹೋರಾಟಗಾರರ ಮೇಲೆ ಹಾಕಿರುವ ಪೊಲೀಸ್ ಕೇಸ್‌ಗಳನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶೀ ರಫಾಯಲ್ ರಾಜ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನಮ್ಮ ಮೆಟ್ರೋ ಹಿಂದಿ ವೇದಿಕೆ ವಿರುದ್ದ ಕರ್ನಾಟಕ ರಕ್ಷಣೆ ವೇದಿಕೆ ಹೋರಾಟ ನಡೆಸಿದ ಸಂದರ್ಭದಲ್ಲಿ ೩೦೦ ಕ್ಕೂ ಹೆಚ್ಚು ಕಾಯ್ಕರ್ತರ ಮೇಲೆ ಕೇಸುಗಳನ್ನು ದಾಖಲಿಸಿದ್ದಾರೆ ರಾಜ್ಯದಲ್ಲಿ ೧೫೦೦ ಕ್ಕೂ ಹೆಚ್ಚು ಕನ್ನಡ ಪರ ಹೋರಾಟಗಾರರ ಮೇಲೆ ಅನಗತ್ಯ ಐಪಿಸಿ ಸೆಕ್ಷನ್‌ಗಳನ್ನು ಹಾಕಿ ಕೇಸುಗಳನ್ನು ಹಾಕಲಾಗಿದೆ. ಈ ಎಲ್ಲಾ ಕೇಸುಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ಎಸ್ ಆರ್ ಲೋಬೋ ಮಾತನಾಡಿ ಈ ತಿಂಗಳು ನಡೆಸಲಿರುವ ಗ್ರಾಮೀಣ ಬ್ಯಾಂಕ್‌ಗಳ ಉದ್ಯೋಗ ಪ್ರವೇಶಾತಿ ಪರೀಕ್ಷೆಗಳನ್ನು ಕೂಡಲೇ ತಡೆಹಿಡಿಯಬೇಕು ಕೇಂದ್ರ ಸರಕಾರದ ಕುಮ್ಮಕಿನಿಂದ ಕನ್ನಡಿಗೇತರನ್ನು ಈ ಗ್ರಾಮೀಣ ಬ್ಯಾಂಕ್‌ಗಳಿಗೆ ನೇಮಕಾತಿ ಮಾಡುವ ಬೃಹತ್ ಸಂಚು ಇದಾಗಿದೆ. ಸಾವಿರಾರು ಮಂದಿ ಕನ್ನಡಿಗ ನಿರುದ್ಯೋಗಿಗಳಿಗೆ ಸಿಗಬೇಕಾದ ಹುದ್ದೆಗಳು ಬೇರೆ ರಾಜ್ಯದವರ ಪಾಲಗುತ್ತಿದೆ ಎಂದರು.
ವರದಿ:ಪಲ್ಲವಿ ಸಂತೊಷ್

Related posts

Leave a Reply