Header Ads
Breaking News

ಕನ್ನಡ ಭಾಷೆ ಸಮೃದ್ಧವಾಗಿಸಲು ಕನ್ನಡ ಶಾಲೆಗೆ ಒತ್ತು ನೀಡಬೇಕು : ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿಕೆ

ವಿಟ್ಲ: ಕುದ್ದುಪದವು ಸರ್ಕಾರಿ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆಯಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಕನ್ನಡ ಭಾಷೆಯನ್ನು ಸಮೃದ್ಧವಾಗಿಸುವ ನಿಟ್ಟಿನಲ್ಲಿ ಕನ್ನಡ ಶಾಲೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಯುವ ಶಕ್ತಿ ಕನ್ನಡದ ಕಡೆಗೆ ಗಮನ ಹರಿಸುವ ಅನಿವಾರ್ಯತೆ ಇದೆ ಎಂದು ಹೇಳಿದರು.ಅಧ್ಯಕ್ಷತೆಯನ್ನು ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು ವಹಿಸಿದ್ದರು. ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ ನಿವೃತ್ತ ಮೇಲ್ವಿಚಾರಕರು, ಗೌರವ ಶಿಕ್ಷಕರು, ಸಿಬ್ಬಂದಿಗಳನ್ನು ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿಠಲ ನಾಯಕ್ ಮತ್ತು ಬಳಕ ಕಲ್ಲಡ್ಕ ಅವರಿಂದ ಸಂಗೀತ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು. ರಾತ್ರಿ ಬಹುಮಾನ ವಿತರಣೆ ಮತ್ತು ಸಮಾರೋಪ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು, ತಾಲೂಕು ಪಂಚಾಯಿತಿ ಸದಸ್ಯೆ ಕವಿತಾ ಸುಬ್ಬ ನಾಯ್ಕ, ಕೇಪು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಯಶಸ್ವಿನೀ ಶಾಸ್ತ್ರಿ ನೆಕ್ಕರೆ, ಸದಸ್ಯರಾದ ಅಬ್ದುಲ್ ಕರೀಮ್ ಕುದ್ದುಪದವು, ದಿವ್ಯ ಮೈರ, ಆಶ್ರಮ ಶಾಲೆ ಶಿಕ್ಷಕಿ ಭವ್ಯ ಪಿ, ಜತೆಕಾರ್ಯದರ್ಶಿ ನಾರಾಯಣ ಕುಲಾಲ್ ಅಮೈ ಸ್ವಸ್ತಿ, ಉಪಾಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಗೌರವ ಸಲಹೆಗಾರರಾದ ರೇವಣ್ಣ ನಾಯ್ಕ, ಪುಷ್ಪಾ ಎಚ್., ಕೋಶಾಧಿಕಾರಿ ಎ. ಗೋವಿಂದರಾಯ ಶೆಣೈ ಅಡ್ಯನಡ್ಕ ,ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *