Header Ads
Breaking News

ಕನ್ನಡ ಸಾಹಿತ್ಯ ಪರಿಷತ್‍ನ ಚುನಾವಣೆ : ಡಾ. ಎಂ.ಪಿ. ಶ್ರೀನಾಥ್‍ರಿಂದ ನಾಮಪತ್ರ ಸಲ್ಲಿಕೆ

ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಚುನವಣೆಗೆ ಡಾ. ಎಂ.ಪಿ. ಶ್ರೀನಾಥ್ ಸ್ಪರ್ಧಿಸುತ್ತಿದ್ದು, ಇಂದು ಮಂಗಳೂರು ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಮಂಗಳೂರು ತಾಲೂಕು ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ ಅವರಿಗೆ ನಾಮಪತ್ರ ಸಲ್ಲಿಸಿ ಮಾತನಾಡಿದ ಡಾ. ಎಂ.ಪಿ. ಶ್ರೀನಾಥ್ ಅವರು, ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಮನೆ ಮನೆಗಳಲ್ಲಿಯೂ ಕೂಡ ಕನ್ನಡ ಸಾಹಿತ್ಯದ ಕಂಪನ್ನು ಪಸರಿಸಬೇಕು. ಸಾಹಿತ್ಯದ ಕಾರ್ಯಕ್ರಮಗಳು ನಿರಂತರವಾಗಿ ನಡಿಬೇಕು. ಎಂಬ ನಿಟ್ಟಿನಲ್ಲಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎಂದು ಹೇಳಿದರು.

ಈ ಸಂದರ್ಭ ಡಾ. ಮಂಜುನಾಥ್ ರೇವಣ್ಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *