Header Ads
Breaking News

ಕರಾವಳಿಯಲ್ಲಿ ಧಾರಾಕಾರ ಮಳೆ ಹಿನ್ನೆಲೆ : ಇತಿಹಾಸ ಪ್ರಸಿದ್ಧ ಕಾರಿಂಜ ದೇವಸ್ಥಾನದ ತಡೆಗೋಡೆ ಕುಸಿತ

ಬಂಟ್ವಾಳ: ನಿನ್ನೆಯಿಂದ ಸುರಿದ ಮಳೆಗೆ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ತಡೆಗೋಡೆ ಕುಸಿದು ಬಿದ್ದಿದೆ.ಶ್ರೀ ಕಾರಿಂಜೇಶ್ವರ ದೇವಸ್ಥಾನದ ಎಡ ಪಾರ್ಶ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದ್ದು, ಬುಧವಾರ ಬೆಳಗ್ಗೆ ಸಿಬಂದಿಗಳ ಗಮನಕ್ಕೆ ಬಂದಿದೆ.

ಇಲ್ಲಿ ಅಂಗಣದಲ್ಲಿ ವಾನರಗಳಿಗೆ ನೈವೇದ್ಯ ಬಳಸುತ್ತಿದ್ದು, ಅಂಗಣದ ಇಂಟರ್ ಲಾಕ್ ಕಿತ್ತು ಹೋಗಿದೆ. ದೇವಸ್ಥಾನ ಬೃಹತ್ ಬಂಡೆಯ ಮೇಲೆ ಸ್ಥಾಪಿತಗೊಂಡಿದ್ದು, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿದೆ. ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ದೇವಸ್ಥಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಡಳಿತಾಧಿಕಾರಿ ನೋಣಯ್ಯ ನಾಯ್ಕ್ ಅವರು ತಿಳಿಸಿದ್ದಾರೆ. ತಜ್ಞರ ಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *