Header Ads
Header Ads
Breaking News

ಕರಾವಳಿಯಲ್ಲಿ ಪ್ರವಾಸದಲ್ಲಿ ರಾಹುಲ್ ಗಾಂಧಿ ಸರ್ಕ್ಯೂಟ್‌ಹೌಸ್‌ನಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷರೊಂದಿಗೆ ಸಮಾಲೋಚನೆ

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಬ್ಲಾಕ್ ಸಮಿತಿ ಅಧ್ಯಕ್ಷರೊಂದಿಗೆ ಸಮಾಲೋಚನೆ ನಡೆಸಿದ್ರು.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿವಿಧ ಬ್ಲಾಕ್ ಗಳ ಅಧ್ಯಕ್ಷರುಗಳು ಭಾಗವಹಿಸಿದ್ರು. ರಾಹುಲ್ ಗಾಂಧಿ ತಂಗಿರುವ ಸರ್ಕ್ಯೂಟ್ ಹೌಸ್ ಗೆ ಬಿಗಿ ಭದ್ರತೆ ಕಲ್ಪಿಸಿರುವುದರಿಂದ ಭದ್ರತಾ ಸಿಬ್ಬಂದಿಗಳು ಸರ್ಕ್ಯೂಟ್ ಹೌಸ್ ಪ್ರವೇಶಿಸುವ ಪ್ರತಿ ವಾಹನಗಳನ್ನು ತಪಾಸಣೆ ನಡೆಸಿದ್ರು. ಈ ಸಂದರ್ಭ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ಜಿಲ್ಲೆಯಿಂದ 10 ಬ್ಲಾಕ್ ಸಮಿತಿ ಅಧ್ಯಕ್ಷರುಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ 16 ಬ್ಲಾಕ್ ಸಮಿತಿ ಅಧ್ಯಕ್ಷರುಗಳ ಸಹಿತ ಕೆಪಿಸಿಸಿ ಸದಸ್ಯರು ಭಾಗವಹಿಸಿದ್ರು.ಇನ್ನು ನಿಯಮದ ಪ್ರಕಾರ ಸಕ್ಯೂಟ್ ಹೌಸ್ ನಲ್ಲಿ ರಾಜಕೀಯ ಸಭೆ ನಡೆಸುವಂತಿಲ್ಲ. ಅದರೂ ಮಂಗಳೂರಿನ ಸಕ್ಯೂಟ್ ಹೌಸ್ ನಲ್ಲಿ ರಾಹುಲ್ ಗಾಂಧಿ ಸಭೆ ನಡೆಸಿದರು. ಸಭೆಯ ಬಳಿಕ ರಾಹುಲ್ ಗಾಂಧಿ ಚಿಕ್ಕಮಗಳೂರಿಗೆ ತೆರಳಿದ್ರು.
ವರದಿ: ನಾಗೇಶ್ ಕಾವೂರು