Breaking News

ಕರಾವಳಿಯಲ್ಲಿ ಹಾಲೆ ಮರದ ತೊಗಟೆ ಕಷಾಯ ಸೇವನೆ

ಆಷಾಡ ತಿಂಗಳ ಆಟಿ ಅಮವಾಸ್ಯೆ ಬಹಳ ವಿಶೇಷ ದಿನ. ಸುರ್ಯೋದಕ್ಕೆ ಮೊದಲೇ ಹಾಲೆ ಮರದ ಸನಿಹ ಹೋಗಿ ಬಿಳಿ ಕಲ್ಲಿನಿಂದ ಜಜ್ಜಿ ಆ ಮರದ ತೊಗಟೆಯನ್ನು ತೆಗೆದು ಬಳಿಕ ಮನೆ ಮಂದಿಯೆಲ್ಲರೂ ಆರೋಗ್ಯ ವರ್ಧಕವಾದ ಹಾಲೆಯ ಅತಿ ಕಹಿಯಾದ ರಸವನ್ನು ಕುಡಿಯುತ್ತಾರೆ. ನಂತರ ತೆಂಗಿನಕಾಯಿ ತುರಿ ಹಾಕಿದ ಗಂಜಿ ಉಣ್ಣುತ್ತಾರೆ. ಇದು ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಒಂದು ವಿಶೇಷ ಸಂಪ್ರದಾಯವಿದು.


ವೈಜ್ಞಾನಿಕವಾಗಿ ಈ ಆಚರಣೆಯನ್ನು ಗಮನಿಸಿದರೆ ಹಾಲೆ ತೊಗಟೆಯ ರಸ ಒಂದು ವರ್ಷದ ಕಾಲ ಯಾವುದೇ ರೋಗ ರುಜಿನಗಳು ದೂರವಾಗುತ್ತದೆ ಎನ್ನುವಂತಹ ನಂಬಿಕೆ ಇದೆ. ಅನ್ಯ ಆಹಾರ ಸೇವನೆಗೆ ಮೊದಲೌ ಖಾಲಿ ಹೊಟ್ಟೆಗೆ ಸೇವಿಸುವುದು ಅತೀ ಉತ್ತಮವೆಂದು ತಿಳುವಳಿಕೆ ಇದೆ. ಈ ರೀತಿ ಸೇವಿಸುವುದರಿಂದ ಅನೇಕ ಬಗೆಯ ಔಷಧಿಗಳು ನಮ್ಮ ಶರೀರಕ್ಕೆ ಸೇರಿತು ಎಂಬ ಬಲವಾದ ನಂಬಿಕೆ ಇದೆ.
ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ವಿಪರೀತ ಮಳೆ, ಮಳೆಗಾಲದ ಈ ತಿಂಗಳು ಒಂದು ಹೊತ್ತಿನ ಊಟಕ್ಕೂ ಕಷ್ಟವಿತ್ತಂತೆ. ಮಳೆಯಿಂದಾಗಿ ಶರೀರದಲ್ಲಿ ಕಫ ವೃದ್ಧಿಸಿ ಅಗ್ನಿ ಕುಂಠಿತವಾಗುತ್ತದೆ. ಅಪೌಷ್ಠಿಕತೆಯಿಂದ ರೋಗಗಳೂ ಹೆಚ್ಚು. ಆದ್ದರಿಂದ ಈ ಮಾಸದಲ್ಲಿ ಔಷಧೀಯ ಗುಣವಿರುವ ಹಾಲೆ ಕಷಾಯವನ್ನು ಸೇವಿಸುತ್ತಾರೆ. ಯಾರು ತೊಗಟೆಯ ರಸವನ್ನು ನಂಬಿಕೆಯಿಂದ ಸೇವಿಸುತ್ತಾರೆಯೋ ಅವರು ವರ್ಷಪೂರ್ತಿ ಆರೋಗ್ಯವಾಗಿರುತ್ತಾರೆ ಎಂಬ ಬಲವಾದ ನಂಬಿಕೆ ಇದೆ.
ಪ್ರತೀ ವರುಷದಂತೆ ಈ ವರುಷವೂ ಪಣಂಬೂರು ಪರಿಸರದ ಜನರು ಮುಂಜಾನೆ ಅಂದರೆ ಸೂರ್ಯೋದಯಕ್ಕೆ ಮೊದಲೇ ಹಾಲೆ ಮರದ ಹತ್ತಿರ ಹೋಗಿ ತೊಗಟೆಯನ್ನು ಕಲ್ಲಿನಿಂದ ಜಜ್ಜಿತ್ತಿರುವ ದೃಶ್ಯ ಕಂಡುಬಂತು.
ವರದಿ: ಶರತ್

Related posts

Leave a Reply