Header Ads
Breaking News

ಕರಾವಳಿಯಾದ್ಯಂತ ಭಾರೀ ಮಳೆ : ಪುತ್ತೂರಿನಲ್ಲಿ ಸೇತುವೆ ಮುಳುಗಡೆ

ಕರಾವಳಿಯಾದ್ಯಂತ ಇಂದು ಕೂಡಾ ಭಾರೀ ಮಳೆ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಜಿಲ್ಲೆಯ ತಗ್ಗು ಪ್ರದೇಶಗಳು ಮುಳಗಡೆಯಾಗುವ ಆತಂಕವೂ ಎದುರಾಗಿದೆ. ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕೊಂಚ ಮಟ್ಟಿಗೆ ತಗ್ಗಿರುವ ಪರಿಣಾಮ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದ್ದರೂ, ಅಪಾಯದ ಮಟ್ಟಕ್ಕೆ ತಲುಪಿಲ್ಲ. ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಹಾಗೂ ಸುಳ್ಯ ಭಾಗದ ಹಲವೆಡೆ ಭಾರೀ ಮಳೆ ಮುಂದುವರಿದಿದೆ. ಭಾರೀ ಮಳೆ ಹಿನ್ನಲೆಯಲ್ಲಿ ಪುತ್ತೂರು- ಪಾಣಾಜೆ ಸಂಪರ್ಕಿಸುವ ರಸ್ತೆಯ ಚೇಳ್ಯಡ್ಕ ಎಂಬಲ್ಲಿ ನಿರ್ಮಾಣಗೊಂಡಿರುವ ಸೇತುವೆ ಮುಳುಗಡೆಗೊಂಡಿದೆ. ಇದರಿಂದಾಗಿ ಬೆಟ್ಟಂಪಾಡಿ, ಚೇಳ್ಯಡ್ಕ ಹಾಗೂ ಇರ್ದೆ ಮೊದಲಾದ ಭಾಗಗಳ ಸಾರ್ವಜನಿಕರಿಗೆ ತೊಂದರೆಯಾಗಿದೆ. ಲಾಕ್ ಡೌನ್ ಜಾರಿಯಲ್ಲಿರುವ ಕಾರಣ ವಾಹನ ಸಂಚಾರ ವಿರಳವಾಗಿರುವ ಕಾರಣ ಸೇತುವೆ ಮುಳುಗಡೆಯಾಗಿರುವುದರಿಂದ ಹೆಚ್ಚಿನ ಸಮಸ್ಯೆಯಾಗಿಲ್ಲ.

Related posts

Leave a Reply

Your email address will not be published. Required fields are marked *