Header Ads
Breaking News

ಕರಾವಳಿಯ ಅವಳಿ ಜಿಲ್ಲೆಯಲ್ಲಿ ನಿರಂತರ ಜಾನುವಾರು ಸಾಗಾಟ : ಹಿಂದೂ ಜಾಗರಣ ವೇದಿಕೆಯ ನರಸಿಂಹ ಶೆಟ್ಟಿ ಮಾಣಿ ಹೇಳಿಕೆ

ವಿಟ್ಲ: ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ಜಾನುವಾರು ಸಾಗಾಟ ಮತ್ತು ಕಳ್ಳತನ ಪ್ರಕರಣಗಳು ನಡೆಯುತ್ತಿದೆ. ಇದರಿಂದ ಜಿಲ್ಲೆಯ ಶಾಂತಿ ಹಾಗೂ ಸಾಮರಸ್ಯ ಹಾಳಾಗುತ್ತಿದೆ. ಅಕ್ರಮ ಗೋ ಸಾಗಾಟ ತಡೆದ ಸಂಘಪರಿವಾರದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು ಮಾಡಲಾಗುತ್ತಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಹಾಗೂ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲ್ಲೂಕು ಅಧ್ಯಕ್ಷ ನರಸಿಂಹ ಶೆಟ್ಟಿ ಮಾಣಿ ಹೇಳಿದರು. 

ಅವರು ವಿಟ್ಲದ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅಕ್ರಮ ಜಾನುವಾರು ಸಾಗಾಟ ಮತ್ತು ಕಳ್ಳತನದ ವಿರುದ್ಧ ಸಂಘಪರಿವಾರ ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿದೆ. ಈ ಸಂದರ್ಭ ಹಲವು ಹೋರಾಟಗಾರ ಹತ್ಯೆ ಕೂಡ ಮಾಡಲಾಗಿದೆ. ಇದರ ಹಿಂದೆ ಜಾನುವಾರು ಸಾಗಾಟದಲ್ಲಿ ಕೆಲವು ಶಕ್ತಿಗಳ ಕೈವಾಡವಿದೆ. ಜಾನುವಾರು ಸಾಗಾಟಗಾರರು ಗೋವುಗಳನ್ನು ಠಾಣೆಯಿಂದ ಬಿಡಿಸಿದ ಸಂದರ್ಭ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಮತ್ತು ಸರ್ಕಾರ ಗೋ ಸಾಗಾಟಗಾರರ ವಿರುದ್ಧ ಪ್ರಕರಣ ದಾಖಲಿಸುವ ಬದಲು ಹಿಡಿದುಕೊಟ್ಟ ಅಮಾಯಕರ ಮೇಲೆ ಪ್ರಕರಣ ದಾಖಲು ಮಾಡುತ್ತಿದ್ದಾರೆ ಎಂದರು. ತಕ್ಷಣವೇ ಸರ್ಕಾರ ಗೋ ಹತ್ಯೆಯ ವಿರುದ್ಧ ಕಾನೂನು ತರಬೇಕು. ಗೋ ಸಾಗಾಟಗಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ, ರಾಜೇಶ್ ನಾಯಕ್ ಕರೋಪಾಡಿ, ಮನೋಜ್ ಪೆರ್ನೆ, ರವಿ ಭಂಡಾರಿ, ಗಣೇಶ್ ಕೆದಿಲ, ಹರ್ಷ ರೈ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.
ವರದಿ: ಮಹಮ್ಮದ್ ಆಲಿ ವಿಟ್ಲ

Related posts

Leave a Reply

Your email address will not be published. Required fields are marked *