Header Ads
Header Ads
Breaking News

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ : ಕೆರೆ, ನದಿ, ತಗ್ಗು ಪ್ರದೇಶ, ಸಮುದ್ರ ತೀರಕ್ಕೆ ತೆರಳದಂತೆ ಮುನ್ನೆಚ್ಚರಿಕೆ

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಮತ್ತು ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚನೆ ತಿಳಿಸಿದ್ದಾರೆ.

ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಅಂಗನವಾಡಿ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಮತ್ತು ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಎಚ್ಚರ ವಹಿಸಬೇಕು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ ಅಥವಾ ಸಮುದ್ರ ತೀರಕ್ಕೆ ತೆರಳಬಾರದು. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಂ 1077 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಉಡುಪಿಯಲ್ಲೂ ಭಾರೀ ಮಳೆ ಮುಂದುವರಿಯುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೋಷಿಸಿದ್ದಾರೆ.

ಕಾಸರಗೋಡು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ.ಸಜಿತ್ ಬಾಬು ತಿಳಿಸಿದ್ದಾರೆ. ರಾಜ್ಯಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದ್ದು, ದ.ಕ., ಉಡುಪಿ, ಉತ್ತರಕನ್ನಡ ಜಿಲ್ಲೆಗಳಲ್ಲಿ ಜು. 24ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜು.23 ಮತ್ತು ಜು.24ರಂದು ತಲಾ 205 ಮಿ.ಮೀ. ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

Leave a Reply

Your email address will not be published. Required fields are marked *