Header Ads
Header Ads
Breaking News

“ಕರಾವಳಿ ಭಾಗದ ಸಂಸದರಿಂದಲೇ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸವಾಗುತ್ತಿದೆ” : ಪ್ರೋಫೆಸರ್ ರಾಧಾಕೃಷ್ಣ ಆರೋಪ

ಕರಾವಳಿ ಭಾಗದ ಸಂಸದರಿಂದಲೇ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸವಾಗುತ್ತಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಮತ್ತು ಮಿಡಿಯಾ ವಿಭಾಗದ ಮುಖ್ಯಸ್ಥ ಆಗಿರುವ ಪ್ರೋಫೆಸರ್ ರಾಧಾಕೃಷ್ಣ ಆರೋಪಿಸಿದರುಇವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಕರಾವಳಿ ವಿವಿಧತೆಯಲ್ಲಿ ಏಕತೆ ಹೊಂದಿದ ಸುಂದರ ನಗರ ಆದರೆ ಇಲ್ಲಿನ ಸಂಸದರಾದ ನಳೀನ್ ಕುಮಾರ್ ಕಟೀಲ್ ಮತ್ತು ಶೋಭಾ ಕರಂದ್ಲಾಜೆಯುವರಿಂದ ಯುವಕರು ಕೋಮು ಪ್ರಚೋದನೆಗೆ ಒಳಗಾಗುತ್ತಿದ್ದಾರೆ ಮತ್ತು ಮೋದಿ ಸರ್ಕಾರದ ದುರಾಡಳಿತದಿಂದ ದೇಶದ ಜನರು ಬೇಸತ್ತಿದ್ದಾರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ತಕ್ಕಪಾಠ ಕಲಿಸುತ್ತಾರೆ ಎಂದು ಹೇಳಿದರು.ಈ ಸಂದರ್ಭ ಕಾಂಗ್ರೆಸ್ ಜಿಲ್ಲಾ ವಕ್ತಾರ ವಿನಯ್‌ರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಭಾರತಿ, ನೀರಜ್‌ಪಾಲ್,ನಝೀರ್ ಬಜಾಲ್,ಕಾಂಗ್ರೆಸ್ ಹಿರಿಯ ನಾಯಕ ಕೋಡಿಜಾಲ್ ಇಬ್ರಾಹಿಂ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply