Header Ads
Header Ads
Breaking News

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಾಹನ ಜಾಥಾಕ್ಕೆ ಚಾಲನೆ

ಬಂಟ್ವಾಳ: ಪ್ರವಾಹ ಪೀಡಿತ, ಅಕಾಲಿಕ ಮಳೆ, ಬರ ನಿರ್ವಹಣೆಗೆ ನೆರವು ನೀಡಲು ಕೇಂದ್ರ, ರಾಜ್ಯ ಸರಕಾರಗಳ ನಿರ್ಲಕ್ಷ್ಯ ಧೋರಣೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬಂಟ್ವಾಳದಿಂದ ಬೆಂಗಳೂರಿಗೆ ವಾಹನ ಜಾಥಾಕ್ಕೆ ಬಿ.ಸಿ.ರೋಡಿನ ಮಿನಿವಿಧಾನಸೌಧ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ ಸಾಲ್ಯಾನ್ ಅವರು ಬಂಟ್ವಾಳ ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಓಸ್ವಲ್ಡ್ ಪ್ರಕಾಶ್ ಫೆರ್ನಾಂಡೀಸ್ ಅವರಿಗೆ ಧ್ವಜ ಹಸ್ತಾಂತರಿಸುವ ಮೂಲಕ ವಾಹನ ಜಾಥಕ್ಕೆ ಚಾಲನೆ ನೀಡಿದರು. ಜಾಥಾವು ಮಡಂತ್ಯಾರು, ಬೆಳ್ತಂಗಡಿ, ಉಪ್ಪಿಂಗಡಿ, ಪುತ್ತೂರು, ಜಾಲ್ಸೂರು, ಸುಳ್ಯ, ಅರಂತೋಡು, ಕಲ್ಲುಗುಂಡಿ ಮಾರ್ಗವಾಗಿ ಸಂಪಾಜೆ ಗೇಟ್ ಬಳಿ ಸಮಾಪ್ತಿಯಾಗಲಿದೆ. ಅ. 12ರಂದು ತಲಕಾವೇರಿಯಿಂದ ಹೊರಟ ಜಾಥಾವು ಬೆಂಗಳೂರಿಗೆ ತಲುಪಲಿದೆ. ಅ. 14ರಂದು ಮಧ್ಯಾಹ್ನ 1ಗಂಟೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂತ್ರಸ್ತರ ಬಹಿರಂಗ ಅಧಿವೇಶನ ನಡೆಯಲಿದೆ. ಈ ಸಂದರ್ಭ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಜಿಲ್ಲಾ ಗೌರವಾಧ್ಯಕ್ಷ ತಾರಾನಾಥ ಗೌಡ ಕುದ್ಪಾಜೆ, ಜಿಲ್ಲಾ ಉಪಾಧ್ಯಕ್ಷ ಅಲ್ವಿನ್ ಮಿನೇಜಸ್, ತಾಲೂಕು ಅಧ್ಯಕ್ಷ ಪ್ರೇಮನಾಥ ಶೆಟ್ಟಿ ಬಾಳ್ತಿಲ, ರಾಮಣ್ಣ ವಿಟ್ಲ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *