Header Ads
Breaking News

ಕಲಾವಿದ ಮೋಹನ್ ಸೋನಾ ಇನ್ನಿಲ್ಲ : ಅಲ್ಪಕಾಲದ ಅನಾರೋಗ್ಯದಿಂದ ನಿಧನ

ಹೆಸರಾಂತ ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ಅ. 12 ರಂದು ರಾತ್ರಿ ನಿಧನರಾಗಿದ್ದಾರೆ. ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ (64) ನಾಡು ಕಂಡ ಪ್ರಸಿದ್ಧ ಕಲಾವಿದ. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ , ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದವರು. ಅನೇಕ ಕಡೆ ಚಿತ್ರಕಲಾ ಪ್ರದರ್ಶನ ಮಾಡಿದವರು. ಸುಳ್ಯದ ಸೋಣಂಗೇರಿಯಲ್ಲಿ ಬಯಲು ಚಿತ್ರಾಲಯ ಮಾಡಿ ಇಡೀ ರಾಜ್ಯದ ಗಮನ ಸೆಳೆದ. ಕಾರವಾರದ ಕಡಲ ತೀರದಲ್ಲಿ ಶಿಲ್ಪಗಳ ನಿಲ್ಲಿಸಿದವರು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು, ಸಹೋದರ ಸಹೋದರಿಯರನ್ನು ಅಗಲಿದ್ದಾರೆ.

Related posts

Leave a Reply

Your email address will not be published. Required fields are marked *