Header Ads
Breaking News

ಕಲ್ಕೂರ ಪ್ರತಿಷ್ಠಾನ ಹಾಗೂ ಹತ್ತು ಸಮಸ್ತರ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ

ನೀರಿನ ಸಮಸ್ಯೆಯಿಂದ ಕಂಗೆಟ್ಟಿರುವ ಮಂಗಳೂರಿನ ಜನತೆ ಇದೀಗ ಮಳೆಗಾಗಿ ದೇವರ ಮೊರೆಹೋಗಿದ್ದಾರೆ. ಹೌದು, ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಮಳೆಗಾಗಿ ಸೀಯಾಳಾಭಿಷೇಕ ನಡೆಸಲಾಯಿತು. ಕಲ್ಕೂರ ಪ್ರತಿಷ್ಠಾನ ಹಾಗೂ ಹತ್ತು ಸಮಸ್ತರ ವತಿಯಿಂದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ದೇವರಿಗೆ ಸೀಯಾಳಾಭಿಷೇಕ ನಡೆಯಿತು.

ಲೋಕಕಲ್ಯಾಣ ಹಾಗೂ ಅತಿವೃಷ್ಠಿ ತಡೆಯುವ ನಿಟ್ಟಿನಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯ್ತು. ಜಿಲ್ಲೆಯಲ್ಲಿ ಮಳೆ ಹಾಗೂ ನೀರಿನ ಸಮಸ್ಯೆ ಈಡೇರಲಿ ಎಂದು ಈ ಸಂದರ್ಭದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯ್ತು. ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ , ಕದ್ರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಎ.ಜೆ.ಶೆಟ್ಟಿ. ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಕಾರ್ಪೋರೇಟರ್ ಆಶೋಕ್ ಡಿ.ಕೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *