Header Ads
Header Ads
Breaking News

ಕಲ್ಚರ್ಪೆ ಪರಿಸರಕ್ಕೆ ಸಿರಿಕುರಲ್ ನಗರ ನಾಮಕರಣ

ಸುಳ್ಯ ತಾಲೂಕು ತುಳು ಸಾಹಿತ್ಯ ಸಮ್ಮೇಳನದ ನೆನಪಿಗಾಗಿ ನೆನಪಿನ ಸಂಚಿಕೆ ಹಾಗೂ ಕಲ್ಚರ್ಪೆ ಪರಿಸರಕ್ಕೆ ನೂತನ ಹೆಸರಿನ ಸಿರಿಕುರಲ್ ನಗರ ನಾಮಫಲಕ ಉದ್ಘಾಟನಾ ಸಮಾರಂಭ ಡಿ.12ರಂದು ನಡೆಯಲಿದೆ ಎಂದು ಸುಳ್ಯ ತಾಲೂಕು ತುಳು ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಗೋಕುಲ್‌ದಾಸ್ ತಿಳಿಸಿದ್ದಾರೆ.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ಶ್ರೀಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಡಾ.ಹರಪ್ರಸಾದ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಸವಣೂರು ವಿದ್ಯಾರಶ್ಮಿ ವಿದ್ಯಾಲಯಗಳ ಸಂಚಾಲಕ ಸೀತಾರಾಮ ರೈ ಸವಣೂರು ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಆಲೆಟ್ಟಿ ಗ್ರಾ.ಪಂ.ಅಧ್ಯಕ್ಷ ಹರೀಶ್ ರಂಗತ್ತಮಲೆ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಉದ್ಯಮಿ ಹರಿರಾಯ ಕಾಮತ್, ಕೆವಿಜಿ ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ.ಲೀಲಾಧರ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ದಯಾನಂದ ರೈ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಶಶಿಧರ ಎ.ಜೆ, ಪದಾಧಿಕಾರಿಗಳಾದ ಭವಾನಿಶಂಕರ ಕಲ್ಮಡ್ಕ, ನಂದರಾಜ್ ಸಂಕೇಶ, ಶಾಫಿಕುತ್ತಮೊಟ್ಟೆ ಇದ್ದರು.

Related posts

Leave a Reply