Breaking News

ಕಲ್ಲಡ್ಕ ಗಲಭೆ ಪ್ರಕರಣ, ಅಮಾಯಕರನ್ನು ಬಂಧಿಸಿಲ್ಲ, ಎಡಿಜಿಬಿ ಅಲೋಕ್ ಕುಮಾರ್

ಬಂಟ್ವಾಳ: ಕಲ್ಲಡ್ಕದಲ್ಲಿ ನಡೆದ ಕಲ್ಲು ತೂರಾಟ, ಗುಂಪು ಘರ್ಷಣೆ ಸೇರಿದಂತೆ ಸಾರ್ವಜನಿಕ ಆಸ್ತಿ ನಷ್ಟಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ಅಮಾಯಕರನ್ನು ಬಂಧಿಸಿಲ್ಲ. ಆದರೆ ಪ್ರಕರಣದಲ್ಲಿ ಭಾಗಿಯಾದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಇದು ಎಡಿಜಿಪಿ ಅಲೋಕ್ ಮೋಹನ್ ಅವರ ಖಡಕ್ ನುಡಿ.
ಕಲ್ಲಡ್ಕದಲ್ಲಿ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಗುರುವಾರ ಸಂಜೆ ಬಂಟ್ವಾಳ ನಗರ ಠಾಣೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಅತೀ ಸೂಕ್ಷ ಪ್ರದೇಶ ಎಂದು ಗುರುತಿಸಿರುವ ಕಲ್ಲಡ್ಕದಲ್ಲಿ ಘರ್ಷಣೆ ಮರುಕಳಿಸದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಲವು ವರ್ಷಗಳ ಬಳಿಕ ಮತ್ತೆ ಕಲ್ಲಡ್ಕದಲ್ಲಿ ಅಹಿತಕತ ಘಟನೆ ನಡೆದಿರುವುದು ವಿಷಾದನೀಯ, ಮುಂದಿನ ದಿನಗಳಲ್ಲಿ ಇದು ಮರುಕಳಿಸದಂತೆ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿzರು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಸ್ಪಿಯವರು ಇಲ್ಲೇ ಇದ್ದು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದ ಅವರು ಕಲ್ಲಡ್ಕದಲ್ಲಿ ಪದೇ ಪದೇ ನಡೆಯುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಹುಡಕುವ ನಿಟ್ಟಿನಲ್ಲಿ ಇಲಾಖೆ ಗಮನ ವಹಿಸುವುದಾಗಿ ಅವರು ತಿಳಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬುವವರ ಬಗ್ಗೆ ನಿಗಾ ವಹಿಸುವುದಾಗಿ ತಿಳಿಸಿದ ಅವರು ಅಂತವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಸ್ಪಿಯವರಿಗೆ ಆದೇಶಿಸಿರುವುದಾಗಿ ಎಡಿಜಿಪಿ ತಿಳಿಸಿದರು. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲೇ ಗಲಭೆ ನಡೆದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದವೂ ಕ್ರಮ ಜರುಗಿಸಲಾಗುವುದು ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಈ ಸಂದರ್ಭ ಪಶ್ಚಿನ ವಲಯ ಐಜಿಪಿ ಹರಿಶೇಖರನ್, ಎಸ್ಪಿ ಭೂಷಣ್ ಜಿ. ಬೊರಾಸೆ, ಎಡಿಷನಲ್ ಎಸ್ಪಿ ವೇದಮೂರ್ತಿ, ಡಿವೈ‌ಎಸ್ಪಿ ರವೀಶ್, ಸಿ‌ಐ ಮಂಜಯ್ಯ, ನಗರ ಠಾಣಾಧಿಕಾರಿ ರಕ್ಷಿತ್ ಎ.ಕೆ. ಹಾಜರಿದ್ದರು.
ಇದಕ್ಕಿಂತ ಮೊದಲು ವಿಟ್ಪ ಠಾಣೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿ ಹಿಂದಿರುವಾಗ ಕಲ್ಲಡ್ಕ ಮಾರ್ಗವಾಗಿಯೇ ವಾಪಸ್ಸು ಬಂದರೂ ಅಲ್ಲಿ ಇಳಿಯದೇ ಕಾರಿನಲ್ಲಿ ಸಾಗುತ್ತಲೇ ಅಲ್ಲಿನ ಪರಿಸ್ಥಿತಿಯನ್ನು ವೀಕ್ಷಿಸಿದರು.
ಕಲ್ಲಡ್ಕ ಗಲಭೆಗೆ ಸಂಬಂಧಿಸಿ ಬಂಧಿತರಾಗಿದ್ದ ೧೮ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಗುರುವಾರ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರು ಪಡಿಸಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಧೀಶರು ೧೫ ದಿನಗಳ ನ್ಯಾಯಂಗ ಬಂಧನ ವಿಧಿಸಿರುವುದಾಗಿ ತಿಳಿದು ಬಂದಿದೆ.
ಕಲ್ಲಡ್ಕ ಶಾಂತ
ಗುಂಪು ಘರ್ಷಣೆಯಿಂತ ತತ್ತರಿಸದ ಕಲ್ಲಡ್ಕದಲ್ಲಿ ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ಬಂದಿದೆ. ಅಂಗಡಿ ಮುಂಗಟ್ಟುಗಳಲ್ಲಿ ವ್ಯಾಪಾರ, ವಾಹನ ಹಾಗೂ ಜನಸಂಚಾರ ಎಂದಿನಂತಿದೆ. ಕಲ್ಲಡ್ಕ ಪರಿಸರದಲ್ಲಿ ಪೊಲೀಸ್ ಬಂದೋಬಸ್ತನ್ನು ಮುಂದುವರಿಸಲಾಗಿದೆ. ಜೊತೆಗೆ ತಾಲೂಕಿನ ಪ್ರಮುಖ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಕಾವಲು ಇದೆ.

Related posts

Leave a Reply