Header Ads
Breaking News

ಕಲ್ಲಡ್ಕ ಪ್ರಭಾಕರ್ ಭಟ್‌ರಿಂದ ಪೊಲೀಸರಿಗೆ ದೂರು!: ಯಾರ ವಿರುದ್ಧ ಗೊತ್ತೇ?!

ಬಂಟ್ವಾಳ: ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹೆಸರನ್ನು ಬಳಸಿಕೊಂಡು ಕಾಂಗ್ರೆಸ್ ಅಭ್ಯರ್ಥಿ ಪರ ನಾನಿದ್ದೇನೆ ಎಂಬರ್ಥ ಬರುವ ಸಂದೇಶಗಳನ್ನು ರವಾನಿಸಲಾಗುತ್ತಿದ್ದು, ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ದೂರು ನೀಡಿದ್ದಾರೆ.

ಸೋಮವಾರ ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದು, ಸಾಮಾಜಿಕ ಜಾಲತಾಣಗಳನ್ನು ತನ್ನ ಹೆಸರಿನಲ್ಲಿ ತಪ್ಪು ಸಂದೇಶ ಬಿತ್ತರಿಸುತ್ತಿರುವ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು. ಇವರು ಉದ್ದೇಶಪೂರ್ವಕವಾಗಿ ನನ್ನ ವಿರುದ್ಧ ನನಗೆ ಅಪಮಾನ ಮಾಡುವಂತೆ ಮತ್ತು ನನ್ನ ವಿಚಾರಕ್ಕೆ ವಿರುದ್ಧವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.

Related posts

Leave a Reply

Your email address will not be published. Required fields are marked *