Header Ads
Header Ads
Breaking News

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಿಮಿನಲ್ ಸಾಕ್ಷ್ಯ ದೊರೆತಿದೆ, ತನಿಖೆಗೆ ಮಂಗಳೂರಿನಲ್ಲಿ ಸಚಿವ ಖಾದರ್ ಒತ್ತಾಯ

ಕಲ್ಲಡ್ಕ ಮತ್ತು ಬಂಟ್ವಾಳದಲ್ಲಿ ನಡೆಯುತ್ತಿರುವ ಆಹಿತಕರ ಘಟನೆಗಳಿಗೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ಅಶ್ರಫ್ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ದೊರತಿದೆ ಎಂದು ಆಹಾರ ಸಚಿವ ಯು. ಟಿ. ಖಾದರ್ ಹೇಳಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ರಫ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೆಲವು ದಿನಗಳ ಹಿಂದೆ ಪ್ರಭಾಕರ ಭಟ್ ಜೊತೆ ಪ್ರತಿಕಾಗೋಷ್ಠಿಯಲ್ಲಿ ಹಾಜರಿದ್ದ. ಅದು ಕಲ್ಲಡ್ಕ ಗಲಭೆಗೆ ಸಂಬಂಧಿಸಿದ ಗೋಷ್ಠಿಯಾಗಿತ್ತು, ಆ ಬಳಿಕ ಅಶ್ರಫ್ ಕೊಲೆ ನಡೆದಿದೆ. ಇದು ಸಂಶಯವನ್ನು ಮತ್ತಷ್ಟು ಬಲಗೊಳಿಸಿದೆ ಅಂತಾ ನೇರವಾಗಿ ಆರೋಪ ಮಾಡಿದ್ದಾರೆ. ಹೀಗೆ ಕೊಲೆ ಆರೋಪಿಯು ಕಲ್ಲಡ್ಕ ಭಟ್ ಪ್ರತಿಕಾಗೋಷ್ಠಿಯಲ್ಲಿ ಹಾಜರಿದ್ದ ಕುರಿತು ಪೊಲೀಸರು ತನಿಖೆ ನಡೆಸಬೇಕಿದೆ. ಭಟ್ ಜೊತೆ ಮಾತುಕತೆ ನಡೆದಿತ್ತೆ ಎಂಬುದನ್ನು ತನಿಖಾ ತಂಡ ಪರಿಶೀಲಿಸಬೇಕು ಎಂದು ಹೇಳಿದ್ದಾರೆ.

Related posts

Leave a Reply