Header Ads
Header Ads
Breaking News

ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆ : ಉಡುಪಿಯ ಕೆಲವು ಪ್ರದೇಶಗಳು ಜಲಾವೃತ

ಉಡುಪಿಯಾದ್ಯಂತ ವರಣು ಅಬ್ಬರಿಸಿದ್ದಾನೆ. ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿದೆ. ಮೂರು ದಿನಗಳ ಕಾಲ ಭಾರೀ ಮಳೆಯ ಹಿನ್ನಲೆಯಲ್ಲಿ ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಕೊರ್ಲಪಾಟಿ ರಜೆ ಘೊಷಿಸಿದ್ದಾರೆ. ಉಡುಪಿಯ ಕಲ್ಸಂಕ, ಮೂಡನಿಡಂಬೂರು, ನಿಟ್ಟೂರಿನ ಕೆಲ ಪ್ರದೇಶಗಳು ಜಲಾವೃತಗೊಂಡಿದ್ದು ಮನೆ ಒಳಗೆ ನೀರು ನುಗ್ಗಿದೆ.

ಇನ್ನು ಕುಂದಾಪುರ, ಕಾರ್ಕಳ ತಾಲೂಕಿನಲ್ಲೂ ಭಾರೀ ಮಳೆಯಾಗಿದ್ದು ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತವಾಗಿದೆ. ಉಡುಪಿಯ ಹಲವೆಡೆ ಮರಗಳು ಬಿದ್ದು ಮನೆಗಳಿಗೆ ಹಾನಿಯಾಗಿದೆ. ವಿದ್ಯುತ್ ಕಂಬಗಳು ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಗಿದೆ. ಜಿಲ್ಲೆಯ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರಮುಖವಾಗಿ ಬಜೆ ಅಣೆಕಟ್ಟಿನಲ್ಲಿ ನೀರು ತುಂಬಿದ್ದು ಹೆಚ್ಚುವರಿ ನೀರನ್ನು ಹೊರ ಬಿಡಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸರಾಸರಿ 159.9ಮಿ.ಮೀಟರ್ ಮಳೆ ದಾಖಲಾಗಿದೆ. ಈಗಾಗಲೇ ರೆಡ್ ಅಲರ್ಟ್ ಘೋಷಿಸಲಾಗಿದ್ದು ಮೀನುಗಾಗರು ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದೆ. ಹಾಗೂ ನದಿ ಹಾಗೂ ಕಡಲ ಬದಿಯ ನಿವಾಸಿಗಳು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ. ಮೋಡ ಕವಿದ ವಾತಾವರಣ ಮುಂದುವರೆದಿದೆ.

Related posts

Leave a Reply

Your email address will not be published. Required fields are marked *