Header Ads
Breaking News

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈಗೆ ಕೊಲೆ ಬೆದರಿಕೆ: ಮೂವರು ಪೊಲೀಸರ ವಶಕ್ಕೆ

ಬಂಟ್ವಾಳ: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲೋಕ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈ ಅವರಿಗೆ ಕೊಲೆ ಬೆದರಿಕೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು 3 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಿವಾಸಿ ಸಚಿನ್(25), ಕಾಸರಗೋಡು ನಿವಾಸಿ ಕಾರ್ತಿಕ (30)ಬಂಟ್ವಾಳ ನಿವಾಸಿ ನಿಶಾಂತ್, (23)ಎಂಬವರು ಪೊಲೀಸ್ ವಶದಲ್ಲಿರುವ ಆರೋಪಿಗಳಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚೆಗೆ ಕರಿಯಂಗಳ ಗ್ರಾಮದ ಬಡಕಬೈಲು ಎಂಬಲ್ಲಿ ವಿಜಯೋತ್ಸವ ಆಚರಿಸುತ್ತಿರುವ ವೇಳೆ ಮಿಥುನ್ ರೈ ಯನ್ನು ಉದ್ದೇಶಿಸಿ ಕೊಲೆ ಬೆದರಿಕೆ ಒಡಿದ್ದು ಸಾಮಾಜಿಕ ಜಾಲಾ ತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಪೊಲೀಸರಿಗೆ ಬಂದ ದೂರಿನ ಹಿನ್ನಲೆಯಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿವಾರಣೆಗೊಳಪಡಿಸಿದ್ದಾರೆ.

Related posts

Leave a Reply

Your email address will not be published. Required fields are marked *