Header Ads
Breaking News

ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಚುನಾವಣೆಗೆ ಸಿದ್ಧತೆ : ಭಾರತದ ಚರಿತ್ರೆಯುಳ್ಳ ವೀಡಿಯೋ ತಯಾರಿಸಿ ಬಿಡುಗಡೆ

ಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಈಗಾಗಲೇ ಸಿದ್ಧತೆಯನ್ನು ಮಾಡಿಕೊಳ್ಳುತ್ತಿವೆ. ಅಂತೆಯೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನವರು ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದಲ್ಲಿಂದ ಪ್ರಸ್ತುತ ಭಾರತದ ಚರಿತ್ರೆಯುಳ್ಳ ವೀಡಿಯೋವನ್ನು ತಯಾರಿಸಿದ್ದು, ಅದರ ಬಿಡುಗಡೆ ಸಮಾರಂಭವು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಅವರು ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪ್ರಚಾರ ಸಮಿತಿಯ ಅಧ್ಯಕ್ಷರಾದ ಹೆಚ್.ಕೆ. ಪಾಟೀಲ್ ಅವರ ನೇತೃತ್ವದಲ್ಲಿ ಭಾರತ ದೇಶದ ಚರಿತ್ರೆಯ ಬಗ್ಗೆ ಮತ್ತು ಈ ದೇಶದ ಪ್ರಧಾನ ಮಂತ್ರಿಗಳು ಯಾವ ರೀತಿಯಲ್ಲಿ ಕೆಲಸ ಮಾಡಿದ್ದಾರೆ ಎಂಬುವುದನ್ನು ಜನತೆಗೆ ತೋರ್ಪಡಿಸಲು ವೀಡಿಯೋ ದೃಶ್ಯವನ್ನು ತಯಾರಿಸಲಾಗಿತ್ತು. ಅದನ್ನು ಬಿಡುಗಡೆ ಮಾಡಿದ್ದೇವೆ. ಮುಂದಿನ ಪ್ರಚಾರದ ಸಭೆಗಳಲ್ಲಿ ಆ ವೀಡಿಯೋ ದೃಶ್ಯವನ್ನು ಪ್ರಸಾರ ಮಾಡಿ ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಹೇಳಿದರು.

ಆನಂತರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ನ ಪ್ರಚಾರ ಸಮಿತಿಯ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ಅವರು ಮಾತನಾಡಿ, ಲೋಕಸಭಾ ಚುನಾವಣೆಗೆ ಪ್ರಚಾರ ಸಮಿತಿಯವರು ಸಿದ್ಧತೆಯನ್ನು ಮಾಡಿಕೊಂಡಿದ್ದು, ಅದಕ್ಕಾಗಿ ಭಾರತದ ಚರಿತ್ರೆಯನ್ನು ತೋರ್ಪಡಿಸುವ ಉದ್ದೇಶದಿಂದ ವೀಡಿಯೋ ದೃಶ್ಯವನ್ನು ತಯಾರಿಸಿ ಬಿಡುಗಡೆ ಮಾಡಿದ್ದೇವೆ. ಇದರಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಮತ್ತು ವಿರೋಧ ಪಕ್ಷದ ವೈಫಲ್ಯದ ಬಗ್ಗೆ ಬಿಂಬಿಸುವ ವೀಡಿಯೊ ದೃಶ್ಯವಿದು. ಅಂತಹ ವೀಡಿಯೋ ದೃಶ್ಯವನ್ನು ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

ಈ ಸಂದರ್ಭ ಮಾಜಿ ಶಾಸಕರಾದ ಜೆ.ಆರ್. ಲೋಬೋ, ಟಿ.ಕೆ. ಸುಧೀರ್, ಮತ್ತಿತರರ ಕಾಂಗ್ರೆಸ್ ಮುಖಂಡರು ಈ ವೇಳೆ ಹಾಜರಿದ್ದರು.

Related posts

Leave a Reply

Your email address will not be published. Required fields are marked *