Header Ads
Breaking News

ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ

ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.

ಅವರು ಕೇರಳ ವಿಧಾನಸಭಾ ಚುನಾವಣೆಯ ನಿಮಿತ್ತ ಮಂಜೇಶ್ವರಕ್ಕೆ ತೆರಳುವ ಮುನ್ನ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಬೆಳಗಾವಿಯಲ್ಲಿ ಡಿಕೆಶಿ ಅವರ ವಿರುದ್ಧ ಪ್ರತಿಭಟನೆ ಸಂದರ್ಭ ನಡೆದ ವಿದ್ಯಮಾನ ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಡಿಕೆಶಿ ಅವರಿಗೆ ಚಪ್ಪಲಿ ಹಾರ ಎಸೆದಿಲ್ಲ, ಹಿಂದುಗಡೆಯಲ್ಲಿದ್ದ ವಾಹನಕ್ಕೆ ಎಸೆದರಿಬಹುದು. ಆದರೆ ಮುಂದಿನ ದಿನಗಳಲ್ಲಿ ಯಾವುದೇ ಸಣ್ಣ ಘಟನೆ ಕೂಡ ನಡೆಯಬಾರದು ಹಾಗೂ ಅಲ್ಲಿಗೆ ಬರುವವರಿಗೆ ಎಲ್ಲರಿಗೂ ಸೂಕ್ತ ಭದ್ರತೆ ಒದಗಿಸಬೇಕು ಎಂದು ಈಗಾಗಲೇ ಪೊಲೀಸ್ ಅಯುಕ್ತರಿಗೆ ಸೂಚಿಸಲಾಗಿದೆ. ಎಸ್‍ಐಟಿಯಲ್ಲಿ ದಕ್ಷ ಅಧಿಕಾರಿಗಳಿದ್ದು, ಒಳ್ಳೆಯ ಕೆಲಸ ಮಾಡುತ್ತಾರೆ. ಹಲವಾರು ಸಿಡಿ, ವೀಡಿಯೋ, ಆಡಿಯೋ ಬಂದಿದೆ. ಅದೆಲ್ಲವನ್ನು ವೈಜ್ಞಾನಿಕ ತನಿಖೆಗೆ ಒಳಪಡಿಸಲಾಗಿದೆ. ಸದ್ಯ ತನಿಖೆ ಹಂತದಲ್ಲಿ ಇರುವಾಗ ನಾನು ಏನು ಹೇಳಲು ಇಚ್ಚಿಸುವುದಿಲ್ಲ. ಆದರೆ ತನಿಖೆ ಯಾವುದೇ ಪ್ರಭಾವಕ್ಕೆ ಒಳಗಾಗುವುದಿಲ್ಲ ಅನ್ನುವುದು ಸ್ಪಷ್ಟ ಎಂದು ಅವರು ಹೇಳಿದರು.

Related posts

Leave a Reply

Your email address will not be published. Required fields are marked *