Header Ads
Header Ads
Breaking News

ಕಾನೂನು ಮಾಪನ ಶಾಸ್ತ್ರ ಇಲಾಖೆಯ ಉಪವಿಭಾಗದ ಕಟ್ಟಡಕ್ಕೆ ಶಿಲಾನ್ಯಾಸ

ಕಾನೂನು ಮಾಪನ ಶಾಸ್ತ್ರ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಉಪವಿಭಾಗ ಮಟ್ಟದ ನೂತನ ಕಟ್ಟಡ ‘ಮಾಪನಭವನ’ದ ಶಿಲಾನ್ಯಾಸ ನೆರವೇರಿತು. ನಗರದ ಕುಡುಪು ಸಮೀಪದ ಕರ್ನಾಟಕ ಹೌಸಿಂಗ್ ಬೋರ್ಡ್ ಬಳಿ ಸುಮಾರು 93 ಲಕ್ಷ  ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡಕ್ಕೆ ಆಹಾರ ಸಚಿವ ಝಮೀರ್ ಅಹಮದ್ ಖಾನ್ ಅವರು ಶಿಲಾನ್ಯಾಸ ನೆರೆವೇರಿಸಿದ್ರು.

ಬಳಿಕ ಮಾತನಾಡಿದ ಅವರು, ಕೊಡಗಿನ ಜಲಪ್ರವಾಹದ ರಕ್ಷಣೆಯಲ್ಲಿ ತೊಡಗಿದ್ದ ಯುವಕರನ್ನ ಈಗಾಗಲೇ ಗೌರವಿಸುವ ಕೆಲಸ ಮಾಡಿದ್ದೇವೆ. ರಕ್ಷಣೆಯಲ್ಲಿ ತೊಡಗಿದ್ದ ಪ್ರತಿಯೊಬ್ಬ ವ್ಯಕ್ತಿಗಳಿಗೂ ತನ್ನ ಧಾರ್ಮಿಕ ಕೇಂದ್ರಕ್ಕೆ ಹೋಗಲು1 ಲಕ್ಷ ಪರಿಹಾರ ಧನವನ್ನ ನೀಡಿದ್ದೇನೆ ಎಂದು ಅವರು ಹೇಳಿದರು. ಈ ವೇಳೆ ಮೇಯರ್ ಕೆ.ಭಾಸ್ಕರ್ ಮೊಯ್ಲಿ, ಶಾಸಕ ಡಿ.ವೇದವ್ಯಾಸ್ ಕಾಮತ್ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.

Related posts

Leave a Reply