
ಛತ್ತೀಸ್ ಗಢದಲ್ಲಿ ನಡೆದ ನಕ್ಸಲ್ ವಿರುದ್ಧದ ಹೋರಾಟದಲ್ಲಿ ವೀರ ಮರಣವನ್ನಪ್ಪಿದ ಸೈನಿಕರಿಗೆ ಕಾಪು ಬಿಜೆಪಿ ಯುವಮೋರ್ಚಾ ವತಿಯಿಂದ ಗೌರವ ನಮನ ನಡೆಯಿತು.
ಕಾಪು ಪೇಟೆಯಲ್ಲಿ ಮೇಣದ ಬತ್ತಿಯ ದೀಪ ಹಿಡಿದು ಮೌನ ಮೆರವಣಿಗೆಯಲ್ಲಿ ಸಾಗಿ ಯೋಧರಿಗೆ ನುಡಿ ನಮನ ಸಲ್ಲಿಸಲಾಯಿತು. ಈ ಸಂದರ್ಭ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಪುರಸಭೆ ಅಧ್ಯಕ್ಷ ಅನಿಲ್ ಕುಮಾರ್, ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಕುತ್ಯಾರು ನವೀನ್ ಶೆಟ್ಟಿ, ಸಹಿತ ಹಲವು ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.