Header Ads
Breaking News

ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯ ಬಂಧನ : ಕಾರನ್ನು ಪೊಲೀಸರು ಬೆನ್ನಟ್ಟುತ್ತಿದ್ದಂತೆ ಪಲ್ಟಿಯಾದ ಕಾರು

ಮಂಜೇಶ್ವರ : ಕಾರಿನಲ್ಲಿ ಸಾಗಿಸುತ್ತಿದ್ದ ಗಾಂಜಾದೊಂದಿಗೆ ಒಬ್ಬನನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಶಂಕಾಸ್ಪದವಾದ ರೀತಿಯಲ್ಲಿ ಸಂಚರಿಸುತ್ತಿದ್ದ ಕಾರನ್ನು ಪೊಲೀಸರು ಬೆನ್ನಟ್ಟುತ್ತಿರುವ ಮಧ್ಯೆ ಕಾರು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ. ಕೊರೊನಾ ಲಾಕ್‌ಡೌನ್ ಮಧ್ಯೆಯೂ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಹಾಗೂ ಸಾಗಾಟ ಅವ್ಯಾಹತವಾಗಿದೆ. ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಈ ಕಾರ್ಯಾಚರಣೆ ನಡೆದಿದೆ. ಪೊಲೀಸರನ್ನು ಕಂಡು ಪರಾರಿಯಾಗಲೆತ್ನಿಸಿದ ಬೆನ್ನಟ್ಟುವಾಗ ಕಾರು ಪಲ್ಟಿಯಾಗಿತ್ತು. ಮಂಜೇಶ್ವರ ವೃತ್ತ ನಿರೀಕ್ಷಕ ಅನೂಪ್, ಎಸ್‌ಐ ಬಾಲಚಂದ್ರ , ಎಎಸ್‌ಐಲಕ್ಷ್ಮಿ ನಾರಾಯಣ ಕಾರ್ಯಾಚರಣೆಯಲ್ಲಿ ಹಾಜರಿದ್ದರು. ಮಂಜೇಶ್ವರ ಸಮೀಪದ ಬಟ್ಟಿಪದವು ಎಂಬಲ್ಲಿ ವಾಹನ ತಪಾಸಣೆ ವೇಳೆ ಈ ಕಾರ್ಯಾಚರಣೆ ನಡೆದಿದೆ. ಸ್ಥಳೀಯ ನಿವಾಸಿ ಹುಸೈನ್ (25) ರವರನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಈತನಿಂದ ಹತ್ತು ಕಿಲೋ ಗಾಂಜಾವನ್ನು ವಶಪಡಿಸಲಾಗಿದೆ. ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಾಗಿ ಪೊಲೀಸರು ತಿಳಿಸಿದ್ದಾರೆ.

Related posts

Leave a Reply

Your email address will not be published. Required fields are marked *