Header Ads
Header Ads
Breaking News

ಕಾರ್ಕಳದಲ್ಲಿ ಉಜ್ವಲ್-2 ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣೆ

ಕಾರ್ಕಳ: ಪ್ರಧಾನಿ ನರೇಂದ್ರ ಮೋದಿಯವರ ಮಹಾತ್ಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಉಜ್ವಲ್-2 ಯೋಜನೆಯಡಿಯಲ್ಲಿ ದೇಶದ 6 ಕೋಟಿ ಕುಟುಂಬಗಳು ಉಚಿತವಾಗಿ ಗ್ಯಾಸ್ ಸಿಲಿಂಡರ್ ಪಡೆಯಲಿದೆ. ಆ ಮೂಲಕ ದೇಶದಲ್ಲಿ ಹೊಗೆ ರಹಿತ ಸಮಾಜ ನಿರ್ಮಾಣವಾಗಲಿದೆ ಎಂದು ಶಾಸಕ ಹಾಗೂ ವಿಧಾನಸಭಾ ಪ್ರತಿಪಕ್ಷ ಮುಖ್ಯಸಚೇತಕ ವಿ.ಸುನೀಲ್‌ಕುಮಾರ್ ಹೇಳಿದರು.

ನೀರೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನೀರೆ, ಬೈಲೂರು, ಎರ್ಲಪ್ಪಾಡಿ, ಪಳ್ಳಿ ಗ್ರಾಮ ವ್ಯಾಪ್ತಿಯ ಆರ್ಹ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಉಜ್ವಲ-2 ಯೋಜನೆಯ ಉಚಿತ ಗ್ಯಾಸ್ ಸಂಪರ್ಕ ವಿತರಣೆ ಹಾಗೂ ಸರಕಾರದ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ ಬೈಲೂರು ಪ್ರಸ್ತಾವಿಕವಾಗಿ ಮಾತನಾಡಿದರು. ಉಜ್ವಲ-2 ಯೋಜನೆಡಯಡಿಯಲ್ಲಿ ಕಾರ್ಕಳ ತಾಲೂಕು ವ್ಯಾಪ್ತಿಯೊಂದರಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ 4000 ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.ಕೇಂದ್ರ ಸರಕಾರದ ಮತ್ತಷ್ಟು ಯೋಜನೆಗಳು ಜನರ ಪಾಲಿಗೆ ದೊರಕಲಿರುವುದು ಎಂದರು.ಈ ಸಂದರ್ಭ ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ.ಜೆ.ಶೆಟ್ಟಿ, ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷ ಸದಾನಂದ ಪ್ರಭ, .ಜಿಲ್ಲಾ ಪಂಚಾಯತ್ ಸದಸ್ಯ ಸುಮಿತ್ ಶೆಟ್ಟಿ, ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ವೇತಾ ಶೆಟ್ಟಿ, ಎರ್ಲಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಕುಲಾಲ್, ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸಂಗೀತಾ ನಾಯಕ್, ನೀರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಲೀಲಾವತಿ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *