Header Ads
Header Ads
Breaking News

ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

ಭಾರತದ ರಾಷ್ಟ್ರೀಯ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮತ್ತು ಹೆಬ್ರಿ, ಕಾರ್ಕಳ ನಗರ ಕಾಂಗ್ರೆಸ್ ವತಿಯಿಂದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಮತ್ತು ಕಾರ್ಯಕರ್ತರ ಸಮಾವೇಶ ಕಾರ್ಕಳದಲ್ಲಿ ನಡೆಯಿತು.

ಕಾರ್ಯಕರ್ತರ ಸಮಾವೇಶಕ್ಕೆ ಸಂಸದ ವೀರಪ್ಪ ಮೊಯ್ಲಿ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಸಮೀಪಿಸುತ್ತಿದೆ. ಮೇ. ತಿಂಗಳಲ್ಲಿ ರಾಹುಲ್ ಗಾಂಧಿ ಪ್ರಧಾನಿಯಾಗಲಿದ್ದಾರೆ. ಮೋದಿಯವರ ಬಗ್ಗೆ ಭ್ರಮೆ ನಿರಸನವಾಗಿದೆ. ಅಧಿಕಾರಕ್ಕೇರುವ ಮುನ್ನ ರೈತರ ಸಾಲಮನ್ನಾ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ ಮುಂತಾದ ಪೊಳ್ಳು ಆಶ್ವಾಸನೆ ಕೊಟ್ಟಿದ್ದರು. ಅಧಿಕಾರಕ್ಕೆ ಬಂದ ಮೇಲೆ ಅಮಿತ್ ಷಾ ಅವರೇ ಅದು ಚುನಾವಣಾ ಭಾಷಣಕ್ಕಾಗಿ ಎಂದಿದ್ದಾರೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಯ ಬದಲು ಇದ್ದ ಉದ್ಯೋಗವನ್ನೇ ಜನತೆ ಕಳೆದುಕೊಂಡಿದ್ದಾರೆ. ಆರ್ಥಿಕವಾಗಿ ದೇಶ ದಿವಾಳಿಯಾಗಿದ್ದು, ಜನರ ದಿಕ್ಕನ್ನು ತಪ್ಪಿಸುವ ಉದ್ದೇಶದಿಂದ ದಿನಕ್ಕೊಂದು ನಾಟಕವಾಡುತ್ತಿದ್ದಾರೆ ಎಂದು ವೀರಪ್ಪ ಮೊಯಿಲಿ ಆರೋಪಿಸಿದರು.
ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಯುವ ನಾಯಕ ಹರ್ಷ ಮೊಯ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ.ಬಾವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧಾಕರ ಎನ್ ಕೋಟ್ಯಾನ್, ನೀರೆ ಕೃಷ್ಣ ಶೆಟ್ಟಿ, ಕಾಂಗ್ರೆಸ್ ಪ್ರಮುಖರಾದ ಅಶೋಕ್ ಕೊಡವೂರು, ಎಂ.ಎ.ಗಫೂರ್, ಮುರಳೀಧರ ಶೆಟ್ಟಿ, ಕೊಳ್ಕೆಬೈಲು ಕಿಸಾನ್ ಹೆಗ್ಡೆ, ಇಸ್ಮಾಯಿಲ್ ಅತ್ರಾಡಿ, ಸುಭಿತ್ ಕುಮಾರ್, ಶ್ಯಾಮ ಎನ್.ಶೆಟ್ಟಿ, ಆರೀಫ್ ಕಲ್ಲೊಟ್ಟೆ, ಸೀತಾನದಿ ರಮೇಶ್ ಹೆಗ್ಡೆ, ಸುಧಾಕರ ಶೆಟ್ಟಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವರದಿ: ಕೆ.ಎಂ. ಖಲೀಲ್ ಕಾರ್ಕಳ

Related posts

Leave a Reply

Your email address will not be published. Required fields are marked *