Header Ads
Breaking News

ಕಾರ್ಕಳದಲ್ಲಿ ಬಿಜೆಪಿ ವತಿಯಿಂದ ಪೌರತ್ವ ತಿದ್ದುಪಡಿ ಕಾಯಿದೆ ಬೆಂಬಲಿಸಿ ಬೃಹತ್ ಜಾಥಾ

ಕಾರ್ಕಳ : ಕೇಂದ್ರ ಸರಕಾರವು ಜಾರಿಗೊಳಿಸಿದ ಪೌರತ್ವ ತಿದ್ದುಪಡಿ ಮಸೂದೆಯನ್ನು ಬೆಂಬಲಿಸಿ ಕಾರ್ಕಳದಲ್ಲಿ ಬಿಜೆಪಿ ವತಿಯಿಂದ ಬೃಹತ್ ಜಾಥಾ ನಡೆಯಿತು.

ಕಾರ್ಕಳ ಅನಂತಶಯನದಿಂದ ಆರಂಭವಾದ ಜಾಥಾದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾದಯಾತ್ರೆ ಮೂಲಕ ಮಂಜುನಾಥ ಪೈ ಸಭಾಂಗಣಕ್ಕೆ ಸಾಗಿ ಬಳಿಕ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ದಿಕ್ಸೂಚಿ ಭಾಷಣ ಮಾಡಿ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯಿದೆ ಪೌರತ್ವ ನೀಡುವ ಕಾಯಿದೆಯೇ ಹೊರತು ಪೌರತ್ವ ಕಿತ್ತುಕೊಳ್ಳುವ ಕಾಯಿದೆ ಅಲ್ಲ. 2014ರ ಡಿಸೆಂಬರ್ 31ರೊಳಗೆ ಅತ್ಯಾಚಾರ, ಮತಾಂತರ, ಹಲ್ಲೆ, ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ಬಂದಿರುವ 6 ಧರ್ಮಗಳ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಕಾಯಿದೆ, ಆದರೆ ಕಾಯಿದೆಯನ್ನು ಓದುವ ಸೌಜನ್ಯತೆಯಿಲ್ಲದ ಕಾಂಗ್ರೆಸಿಗರು ಈ ಕಾಯಿದೆ ಕುರಿತು ಮುಸ್ಲಿಮರಲ್ಲಿ ಭೀತಿ ಹುಟ್ಟಿಸಿ ದೇಶದಾದ್ಯಂತ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭ ಕಾರ್ಕಳದ ಶಾಸಕ ವಿ. ಸುನೀಲ್ ಕುಮಾರ್, ಉಡುಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರ ಬಿಜೆಪಿ ಮುಖಂಡರು ಹಾಜರಿದ್ದರು.

Related posts

Leave a Reply

Your email address will not be published. Required fields are marked *